ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯದ ಪ್ರಮಾಣ ಮತ್ತಷ್ಟು ಹೆಚ್ಚಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ನಗರದ ಐದು ಪ್ರಮುಖ ಪ್ರದೇಶಗಳಲ್ಲಿ ವಾಯು ಗುಣಮಟ್ಟ ಸೂಚ್ಯಂಕ (AQI) 500ರ ಗಡಿ ದಾಟಿದ್ದು, ಗಾಳಿಯ ಗುಣಮಟ್ಟ ಅಪಾಯಕಾರಿ ಮಟ್ಟಕ್ಕೆ ತಲುಪಿದೆ.
ದೆಹಲಿಯಷ್ಟೇ ಅಲ್ಲದೆ, ನೆರೆಯ ನೋಯ್ಡಾ, ಗಾಜಿಯಾಬಾದ್ ಮತ್ತು ಗುರುಗ್ರಾಮದಲ್ಲೂ ವಾಯುಮಾಲಿನ್ಯ ತೀವ್ರಗೊಂಡಿದೆ. ಈ ಪ್ರದೇಶಗಳಲ್ಲಿ ಗಾಳಿಯ ಗುಣಮಟ್ಟ ಅತ್ಯಂತ ಕಳಪೆ ಹಂತಕ್ಕೆ ತಲುಪಿದೆ.
ನೋಯ್ಡಾದಲ್ಲಿ ಗರಿಷ್ಠ 533 AQI ದಾಖಲಾಗಿದ್ದರೆ, ಗ್ರೇಟರ್ ನೋಯ್ಡಾದಲ್ಲಿ 517 ಹಾಗೂ ಗಾಜಿಯಾಬಾದ್ನ ಇಂದಿರಾಪುರಂನಲ್ಲಿ 512 AQI ದಾಖಲಾಗಿದೆ. ದೆಹಲಿಯ ಸೋನಿಯಾ ವಿಹಾರ್ನಲ್ಲಿ 525, ಮಾಡಲ್ ಟೌನ್ನಲ್ಲಿ 523, ಆನಂದ್ ವಿಹಾರ್ನಲ್ಲಿ 521, ಆನಂದ್ ಪರ್ವತ್ನಲ್ಲಿ 510 ಹಾಗೂ ರೋಹಿಣಿಯಲ್ಲಿ 505 AQI ದಾಖಲಾಗಿದ್ದು, ವಿಷಕಾರಿ ಗಾಳಿಯ ಪ್ರಮಾಣ ಆತಂಕ ಮೂಡಿಸಿದೆ.
ವಾಯುಮಾಲಿನ್ಯದ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಆಡಳಿತವು ಹಲವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಇದರ ಭಾಗವಾಗಿ 5ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಹೈಬ್ರಿಡ್ ಶಿಕ್ಷಣ ವ್ಯವಸ್ಥೆ ಜಾರಿಗೊಳಿಸಲಾಗಿದೆ.
ಈ ವ್ಯವಸ್ಥೆಯಡಿ ಶಾಲೆಗಳು ಆನ್ಲೈನ್ ಮತ್ತು ಆಫ್ಲೈನ್ ಎರಡೂ ಮಾಧ್ಯಮಗಳಲ್ಲಿ ತರಗತಿಗಳನ್ನು ನಡೆಸುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಹೆಚ್ಚುತ್ತಿರುವ ವಾಯುಮಾಲಿನ್ಯದಿಂದ ಮಕ್ಕಳ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗದಂತೆ ಈ ಕ್ರಮ ಕೈಗೊಳ್ಳಲಾಗಿದೆ.















