Job Alert- ಖಾಸಗಿ ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗಾಗಿ ಸಂದರ್ಶನ, 10ನೇ ತರಗತಿ, ಪಿಯುಸಿ, ಪದವೀಧರರಿಗೆ ಇಲ್ಲಿದೆ ಅವಕಾಶ

ಬೆಂಗಳೂರು: ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ನವೆಂಬರ್ 19ರಂದು ಬೆಂಗಳೂರಿನಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದೆ.

ಅಂದು ಬೆಳಿಗ್ಗೆ 10.30ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಪೀಣ್ಯದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಆವರಣದಲ್ಲಿರುವ ಸಿ.ಒ.ಇ. ಕಟ್ಟಡದ ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿಯಲ್ಲಿ ಖಾಸಗಿ ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗಾಗಿ ಸಂದರ್ಶನ ನಡೆಯಲಿದೆ.

10ನೇ ತರಗತಿ ಉತ್ತೀರ್ಣರಾದವರು, ಪಿಯುಸಿ ಹಾಗೂ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಈ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ಉದ್ಯೋಗಾಕಾಂಕ್ಷಿಗಳು ಹೆಚ್ಚಿನ ಮಾಹಿತಿಗಾಗಿ ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿ, ಸಿ.ಒ.ಇ. ಕಟ್ಟಡ, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಆವರಣ, ತುಮಕೂರು ರಸ್ತೆ, ಪೀಣ್ಯ, ಬೆಂಗಳೂರು ಇಲ್ಲಿ ಸಂಪರ್ಕಿಸಬಹುದು. ಹೆಚ್ಚಿನ ವಿವರಗಳಿಗೆ 7975294271 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸುವಂತೆ ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.