ತಡವಾಗಿ ಹೋಗಿದ್ದೇ ಹಿಂದಿನ ಸಾಲಲ್ಲಿ ಕೂರಲು ಕಾರಣ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ದೆಹಲಿಯಲ್ಲಿ ನಡೆದ ಸೋನಿಯಾ ಗಾಂಧಿಯವರ (Sonia Gandhi) ಆತ್ಮಚರಿತ್ರೆ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಹಿಂದೆ ಕುಳಿತುಕೊಳ್ಳಲು ತಡವಾಗಿ ಬಂದಿದ್ದೇ ಕಾರಣ ಎಂದು ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಸ್ಪಷ್ಟನೆ ನೀಡಿದ್ದಾರೆ.

‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ (Belonging: A Journey of Love) ಪುಸ್ತಕ ಬಿಡುಗಡೆ ಕಾರ್ಯಕ್ರಮದ ಫೋಟೋ ವೈರಲ್ ಆಗಿತ್ತು. ಅದರಲ್ಲಿ ಸಿದ್ದರಾಮಯ್ಯ 5ನೇ ಸಾಲಿನಲ್ಲಿ ಕುಳಿತಿದ್ದರು. ಇದು ಭಾರೀ ಚರ್ಚೆಗೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಅವರು, ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ತಡವಾಗಿ ಆಗಮಿಸಿದ್ದೆ. ಆ ವೇಳೆಗೆ ಮುಂದಿನ ಸಾಲಿನ ಆಸನಗಳೆಲ್ಲ ಭರ್ತಿಯಾಗಿದ್ದವು. ಹೀಗಾಗಿ, ಹಿಂದಿನ ಸಾಲಿನಲ್ಲಿ ಕುಳಿತುಕೊಳ್ಳಬೇಕಾಯ್ತು ಎಂದು ಸ್ಪಷ್ಟಪಡಿಸಿದ್ದಾರೆ. 

ಮೊದಲ ಸಾಲಿನಲ್ಲಿ ಸೋನಿಯಾ ಗಾಂಧಿ ರಾಹುಲ್ ಗಾಂಧಿ, ಖರ್ಗೆ ಹಾಗೂ ಇಂಡಿಯಾ ಒಕ್ಕೂಟದ ನಾಯಕರು ಕೂತಿದ್ದರು. 2ನೇ ಸಾಲಿನಲ್ಲಿ ಕಾಂಗ್ರೆಸ್ ಸಿಎಂಗಳಾದ ಡಿ.ಕೆ.ಶಿವಕುಮಾರ್, ರೇವಂತ್ ರೆಡ್ಡಿ ಸೇರಿ ವಿವಿಧ ರಾಜ್ಯಗಳ ನಾಯಕರು ಕುಳಿತಿದ್ದರು. ಸಿದ್ದರಾಮಯ್ಯ ಅವರು 5ನೇ ಸಾಲಿನಲ್ಲಿ ಕುಳಿತಿದ್ದರು.

ಈ ದೃಶ್ಯ ಸಾಕಷ್ಟು ವೈರಲ್ ಆಗಿತ್ತು. ಸಿದ್ದರಾಮಯ್ಯ ಅವರನ್ನು ಹೈಕಮಾಂಡ್ ಕಡೆಗಣಿಸುತ್ತಿದೆಯೇ ಎಂಬ ಬಗ್ಗೆಯೂ ಚರ್ಚೆ ಆಗಿತ್ತು. ಹೀಗಾಗಿ ಈ ಬಗ್ಗೆ ಅವರು ಸ್ಪಷ್ಟನೆ ನೀಡಿದ್ದಾರೆ.