ಸಹಕಾರ ಭಾರತಿ: ದೀಪಾವಳಿ ಹಬ್ಬದ ಪ್ರಯುಕ್ತ ಗೋಪೂಜಾ ಕಾರ್ಯಕ್ರಮ

ಉಡುಪಿ: ದೀಪಾವಳಿ ಹಬ್ಬದ ಪ್ರಯುಕ್ತ ಸಹಕಾರ ಭಾರತಿ ಉಡುಪಿ ತಾಲೂಕು ಹಾಗೂ ಜಿಲ್ಲಾ ಘಟಕ ಮತ್ತು ಹಿರೇಬೆಟ್ಟು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ (ನಿ.), ನೆಲ್ಲಿಕಟ್ಟೆ, ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ಹಿರೇಬೆಟ್ಟು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ವಠಾರದಲ್ಲಿ ಗೋಪೂಜಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ಸಹಕಾರ ಭಾರತಿ ಉಡುಪಿ ಜಿಲ್ಲಾ ಅಧ್ಯಕ್ಷರಾದ ದಿನೇಶ್ ಹೆಗ್ಡೆ ಆತ್ರಾಡಿ, ಜಿಲ್ಲಾ ಮಹಿಳಾ ಪ್ರಮುಖರಾದ ಶ್ರೀಮತಿ ಆಶಾ ಹೆಗ್ಡೆ, ತಾಲೂಕು ಮಹಿಳಾ ಪ್ರಮುಖರಾದ ಶ್ರೀಮತಿ ರೂಪಾ ಎಸ್. ನಾಯಕ್, ಸಹ ಪ್ರಮುಖರಾದ ಶ್ರೀಮತಿ ಜ್ಯೋತಿ ಡಿ. ಕಾಮತ್, ಹಿರೇಬೆಟ್ಟು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಅಧ್ಯಕ್ಷೆ ಕುಸುಮ ಎನ್. ಪೂಜಾರಿ, ಸಂಘದ ಕಾರ್ಯದರ್ಶಿ ಜ್ಯೋತಿ, ಮಾಜಿ ಅಧ್ಯಕ್ಷೆ ವರದಾಂಭ ಭಟ್ , ಆರ್.ಎಸ್.ಬಿ. ಮಹಿಳಾ ವೇದಿಕೆಯ ಅಧ್ಯಕ್ಷೆ ಭಾರತಿ ಆರ್. ನಾಯಕ್, ಕಾರ್ಯದರ್ಶಿ ಪ್ರೀತಿ ಪಿ. ಕಾಮತ್, ಪ್ರಗತಿಪರ ಕೃಷಿಕರಾದ ಉದಯ ನಾಯಕ್, ಗುರುನಂದ ನಾಯಕ್, ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನಿರ್ದೇಶಕರು ಹಾಗೂ ಸದಸ್ಯರು, ಮತ್ತಿತರರು ಉಪಸ್ಥಿತರಿದ್ದರು.

ಸಹಕಾರ ಭಾರತಿ ಉಡುಪಿ ತಾಲೂಕು ಅಧ್ಯಕ್ಷರಾದ ಪಾಂಡುರಂಗ ಕಾಮತ್ ಎಳ್ಳಾರೆ ಅವರು ಕಾರ್ಯಕ್ರಮವನ್ನು ಸಂಯೋಜಿಸಿ ಅಧ್ಯಕ್ಷತೆ ವಹಿಸಿ ಸ್ವಾಗತಿಸಿದರು.

ಉಡುಪಿ ಗ್ಯಾರೇಜ್ ಮಾಲಕರ ಮತ್ತು ಕಾರ್ಮಿಕರ ಸೌಹಾರ್ದ ಸಹಕರಿ ಸಂಘದ ಅಧ್ಯಕ್ಷರಾದ ಮಂಜುನಾಥ್ ಮಣಿಪಾಲ ನಿರೂಪಿಸಿ, ಸಹಕಾರ ಭಾರತಿ ಉಡುಪಿ ತಾಲೂಕು ಉಪಾಧ್ಯಕ್ಷರಾದ ರತ್ನಾಕರ ಶೆಟ್ಟಿ ವಂದಿಸಿದರು.