ಉಡುಪಿ: ಜಿಲ್ಲೆಯ ಕಾಪು ತಾಲೂಕು ಬೆಳ್ಳೆ – ಕಟ್ಟಿಂಗೇರಿ ಗ್ರಾಮ ವೃತ್ತದ ಗ್ರಾಮಸಹಾಯಕ ಹುದ್ದೆಗಳ ನೇಮಕಾತಿಗೆ 25 ರಿಂದ 45 ವರ್ಷದೊಳಗಿನ ಅರ್ಹರಿಂದ ಷರತ್ತಿಗೊಳಪಟ್ಟು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕಾಪು ತಹಶೀಲ್ದಾರರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.















