ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಬಿ.ಎಸ್.ಸಿ ನರ್ಸಿಂಗ್ ಮತ್ತು ಜಿ.ಎನ್.ಎಮ್ ನರ್ಸಿಂಗ್ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನ ಸೌಲಭ್ಯ ಪಡೆಯಲು ವೆಬ್ಸೈಟ್ https://sevaone.karnataka.gov.in/service ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನ.
ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ: 8277799990, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಮಣಿಪಾಲ ದೂ.ಸಂ: 0820-2574596 ಅಥವಾ ಜಿಲ್ಲಾ / ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.















