ಉಡುಪಿ: ಪ್ರಬೋಧಿನೀ ಏಕಾದಶಿ ಪ್ರಯುಕ್ತ ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಶುಕ್ರವಾರ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಈ ಅಂಗವಾಗಿ ಸುದರ್ಶನ ಹೋಮವನ್ನು ಶ್ರದ್ಧಾಭಕ್ತಿಯಿಂದ ನೆರವೇರಿಸಲಾಯಿತು.

ಪರ್ಯಾಯ ಪೀಠಾಧೀಶರಾದ ಶ್ರೀ ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಸುದರ್ಶನ ಹೋಮದಲ್ಲಿ ಭಾಗವಹಿಸಿ, ಭಕ್ತರಿಗೆ ಮುದ್ರಾಧಾರಣೆ ನೆರವೇರಿಸಿದರು.

ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರ ದರ್ಶನ ಪಡೆದು ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾದರು.















