ಡಾ| ಎಂ.ಎನ್. ರಾಜೇಂದ್ರ ಕುಮಾರ್ ಗೆ ಅಂತಾರಾಷ್ಟ್ರೀಯ ಪ್ರಶಸ್ತಿ

ಮಂಗಳೂರು: ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ, ಸಹಕಾರ ರತ್ನ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರು ಅಂತರಾಷ್ಟ್ರೀಯ ನಾಯಕತ್ವ ಆವಿಷ್ಕಾರದಲ್ಲಿ ಶ್ರೇಷ್ಠತೆ ಪ್ರಶಸ್ತಿಗೆ ಆಯ್ಕೆಗೊಂಡಿದ್ದಾರೆ.
ಹೊಸದಿಲ್ಲಿಯ ಇನ್ಸ್ಟಿಟ್ಯೂಟ್ ಆಫ್ ಎಕನಾಮಿಕ್ ಸ್ಟೆಡೀಸ್ ಸಂಸ್ಥೆ ಶ್ರೀಲಂಕಾದ ಹೋಟೆಲ್ ತಾಜ್ ಸಮುದ್ರದಲ್ಲಿ ಡಿಸೆಂಬರ್ 27ರಂದು ಆಯೋಜನೆ ಮಾಡಿದ  ಇಂಡೋ- ಶ್ರೀಲಂಕಾ ಎಕಾನಮಿಕ್ ಕೋ-ಆಪರೇಷನ್ ಕಾನ್ಫರೆನ್ಸ್ ನಲ್ಲಿ ಡಾ| ಎಂ. ಎನ್. ರಾಜೇಂದ್ರಕುಮಾರ್ ಪ್ರಶಸ್ತಿ ಸ್ವೀಕರಿಸಲಿದ್ದಾರೆ.
ಎಸ್ ಸಿ ಡಿಸಿಸಿ ಬ್ಯಾಂಕ್ ಅನ್ನು ಸುಮಾರು 25 ವರ್ಷಗಳಿಂದ ಮುನ್ನಡೆಸುತ್ತಿರುವ ಅವರು ಈ ಜನಸ್ನೇಹಿ ಬ್ಯಾಂಕನ್ನಾಗಿ ರೂಪಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಬ್ಯಾಂಕಿಂಗ್ ಸೇವೆಯ ಪರಿಕಲ್ಪನೆಯನ್ನು ಅನುಷ್ಠಾನಗೊಳಿಸಿ ಸಹಕಾರಿ ರಂಗಕ್ಕೆ ಹೊಸ ಆಯಾಮವನ್ನು ತಂದು ಕೊಟ್ಟಿದ್ದಾರೆ.
ಅಲ್ಲದೇ ಅವರ ಅಧ್ಯಕ್ಷತೆಯ‌ ಅನಂತರ ಎಸ್ ಸಿಡಿಸಿಸಿ ಬ್ಯಾಂಕಿಗೆ 19 ವರ್ಷಗಳಿಂದ ರಾಜ್ಯ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ ಹಾಗೂ 17 ವರ್ಷಗಳಿಂದ ನಬಾರ್ಡ್ ಪ್ರಶಸ್ತಿಯೂ ಲಭಿಸುತ್ತಿದೆ ಎಂದು ಪ್ರಕಟನೆ ತಿಳಿಸಿದೆ.