ತ್ರಿಶಾ ವಿದ್ಯಾ ಪದವಿ ಪೂರ್ವ ಕಾಲೇಜು, ಕಟಪಾಡಿ ವತಿಯಿಂದ 2006-27 ಸಾಲಿನ ವಾರ್ಷಿಕ ಕ್ರೀಡಾಕೂಟವನ್ನು ದಿನಾಂಕ 23-11-2026 ಸೋಮವಾರದಂದು ಉಡುಪಿ ಜಿಲ್ಲೆಯ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಯಿತು. ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಲಾಯಿತು. ಅಧ್ಯಕ್ಷತೆಯನ್ನು ಸಿದ್ಧಾಂತ್ ಫೌಂಡೇಶನ್ ಟ್ರಸ್ಟಿಯಾದ ಶ್ರೀಮತಿ ನಮಿತ ಜಿ ಭಟ್, ಮುಖ್ಯ ಅತಿಥಿಗಳಾಗಿ ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀ ಮಂಜುನಾಥ್ ಜೋಗಿ, ಪ್ರಾಂಶುಪಾಲರಾದ ಪ್ರೊ. ಹರಿಪ್ರಸಾದ್ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀ ಶಶಿಕಿರಣ್ ಉಪಸ್ಥಿತರಿದ್ದರು
ಮುಖ್ಯ ಅತಿಥಿಯಾಗಿ ಆಗಮಿಸಿರುವ ಶ್ರೀಯುತರು ಪರಿಪೂರ್ಣ ವ್ಯಕ್ತಿಯಾಗಲು ಕ್ರೀಡಾ ಮನೋಭಾವ ಅಗತ್ಯ, ಬೌಥಿಕವಾಗಿ, ದೈಹಿಕವಾಗಿ ಕ್ರೀಡೆ ತುಂಬ ಮುಖ್ಯ, ಕ್ರೀಡೆಯು ವಿದ್ಯಾರ್ಥಿಗಳಲ್ಲಿ ಶಸ್ತು, ಸಮಯಪ್ರಜ್ಞೆ, ಆತ್ಮವಿಶ್ವಾಸ, ನಾಯಕತ್ವ ಬೆಳೆಸುತ್ತದೆ ಎಂದು ತಿಳಿಸಿದರು
ಕಾರ್ಯಕ್ರದ ನಿರೂಪಣೆಯನ್ನು ಸಂಸ್ಥೆಯ ಕನ್ನಡ ಉಪನ್ಯಾಸಕಿಯಾದ ಸರಿತ ನಡೆಸಿಕೊಟ್ಟರು, ಅಂಗ್ಲಭಾಷಾ ಉಪನ್ಯಾಸಕಿ ಶ್ರೀಮತಿ ನಿಧಿ ವಂದಿಸಿದರು.















