ಉಡುಪಿ: ಹೆರ್ಗ ವ್ಯವಸಾಯ ಸೇವಾ ಸಹಕಾರಿ ಸಂಘ ನಿಯಮಿತ ಇದರ ಶತಮಾನೋತ್ಸವ ಸಂಭ್ರಮ, ನವೀಕೃತ ಪ್ರಧಾನ ಕಚೇರಿ ಕಟ್ಟಡ ಉದ್ಘಾಟನೆ ಹಾಗೂ ಸಮಾರೋಪ ಸಮಾರಂಭ ಜ.05 ರಂದು ಪರ್ಕಳ ಸಂಘದ ಪ್ರಧಾನ ಕಚೇರಿಯಲ್ಲಿ ನಡೆಯಲಿದೆ.
ಸಮಾರಂಭದ ಉದ್ಘಾಟನೆಯನ್ನು ಬಸವರಾಜ ಬೊಮ್ಮಾಯಿ, ಮಾನ್ಯ ಗೃಹ ಸಚಿವರು, ಕರ್ನಾಟಕ ಸರ್ಕಾರ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರು ನಡೆಸಲಿದ್ದಾರೆ.
ಅಧ್ಯಕ್ಷತೆಯನ್ನು ಉಡುಪಿ ವಿಧಾನಸಭಾ ಕ್ಷೇತ್ರ ಶಾಸಕ ಕೆ ರಘುಪತಿ ಭಟ್ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ, ಕಾಪು ವಿಧಾನಸಭಾ ಕ್ಷೇತ್ರ ಶಾಸಕ ಲಾಲಾಜಿ ಆರ್. ಮೆಂಡನ್, ಮಾಜಿ ಶಾಸಕ ಪ್ರಮೋದ್ ಮಧ್ವರಾಜ್, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮಂಗಳೂರು ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್, ಪ್ರವೀಣ್ ಬಿ. ನಾಯಕ್, ಚಂದ್ರಪ್ರತಿಮ ಎಂ.ಜೆ., ಗೋಕುಲ್ ದಾಸ್ ನಾಯಕ್, ನೀತಾ ಗುರುರಾಜ್, ಚಂದ್ರಿಕಾ ಕೇಳ್ಕರ್, ಶಾಂತಾರಾಮ ಶೆಟ್ಟಿ, ಸುಮಿತ್ರಾ ಆರ್. ನಾಯಕ್, ಜಯಕರ ಶೆಟ್ಟಿ ಇಂದ್ರಾಳಿ, ಅಪ್ರಾಯ ಶ್ಯಾನುಭಾಗ್ ಹಾಗೂ ಎನ್. ವೇದಮೂರ್ತಿ ಭಟ್ ಉಪಸ್ಥಿತರಿರುವರು.
ಸಮಾರೋಪ ಸಮಾರಂಭ:
ಸಂಘದ ಅಧ್ಯಕ್ಷ ದಿನಕರ ಶೆಟ್ಟಿ ಹೆರ್ಗ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ, ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ, ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ್ ಬಾಬು, ತಾಲೂಕ ಪಂಚಾಯತ್ ಸದಸ್ಯೆ ಶರ್ಮಿಳಾ ಮಾಧವ ಪೂಜಾರಿ, ಆತ್ರಾಡಿ ಹಿರೇಬೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷ ಗುರುನಂದ ನಾಯಕ್, ಸಂಘದ ಉಪಾಧ್ಯಕ್ಷ ಪ್ರಭಾಕರ ಪೂಜಾರಿ, ಸಹಕಾರ ಭಾರತಿ ಅಧ್ಯಕ್ಷ ಬೋಳ ಸದಾಶಿವ ಶೆಟ್ಟಿ, ಪರ್ಕಳ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರೀನಿವಾಸ ಉಪಾಧ್ಯಾಯ, ಶ್ರೀ ವೈಷ್ಣವಿ ದುರ್ಗಾ ದೇಗುಲ ಆಡಳಿತ ಮೊಕ್ತೇಸರ ಜಯರಾಜ್ ಹೆಗ್ಡೆ, ಪುರುಷೋತ್ತಮ ಶೆಟ್ಟಿ, ಪರ್ಕಳ ಎಜುಕೇಶನ್ ಸೊಸೈಟಿ ಅಧ್ಯಕ್ಷ ಅರುಣಾಚಲ ಹೆಗ್ಡೆ ಭಾಗವಹಿಸಲಿದ್ದಾರೆ.
ಮಧ್ಯಾಹ್ನ 2ರಿಂದ 4ರ ವರೆಗೆ ಶ್ರೀ ವಿಠಲ ನಾಯಕ್ ಮತ್ತು ಬಳಗ ಪುತ್ತೂರು ಇವರಿಂದ ಗೀತ ಸಾಹಿತ್ಯ ಸಂಭ್ರಮ ನಡೆಯಲಿದೆ.
ಸಂಜೆ ಗಂಟೆ 4ರಿಂದ ಸಮಾರೋಪ ಸಮಾರಂಭ ನಡೆಯಲಿದೆ.
ಸಂಜೆ 5.30 ರಿಂದ 7.30 ರವರೆಗೆ ‘ರಾಗ್ ರಂಗ’ ಕಲಾವಿದರು ಮುಲ್ಕಿ ಇವರಿಂದ ಸಂಗೀತ ರಸಮಂಜರಿ ಕಾರ್ಯಕ್ರಮ ನಡೆಯಲಿದೆ.