ಉಡುಪಿ: ಜ.11ರಂದು ಉಡುಪಿಯಲ್ಲಿ ನಡೆಯಲಿರುವ ಮುಸ್ಲಿಂ ಬಿಲ್ಲವ ಸ್ನೇಹ ಸಮಾವೇಶದಲ್ಲಿ ಭಾಗವಹಿಸುವುದಿಲ್ಲ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟಪಡಿಸಿದ್ದಾರೆ.
ಅಂದು ಶಿವಮೊಗ್ಗದಲ್ಲಿ ಪ್ರಗತಿ ಪರಿಶೀಲನಾ ಸಭೆ, ಅರ್ಚಕರ ಸಮಾವೇಶ, ಧಾರ್ಮಿಕ ಸಭೆಯಲ್ಲಿ ಭಾಗವಹಿಸುತ್ತಿದ್ದೇನೆ. ಸಾಮಾಜಿಕ ಜಾಲತಾಣದಲ್ಲಿ ಬಿಲ್ಲವ, ಮುಸ್ಲಿಂ ಸ್ನೇಹ ಸಮಾವೇಶವನ್ನು ಉದ್ಘಾಟಿಸುವುದಾಗಿ ಸುದ್ದಿ ಹರಿಬಿಡಲಾಗಿದ್ದು ಇದು ಸತ್ಯಕ್ಕೆ ದೂರವಾಗಿದೆ ಎಂದರು.
ಈ ಮಧ್ಯೆ ಸಮಾವೇಶ ಆಯೋಜನೆ ವಿಚಾರವಾಗಿ ಪುಣೆ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ವಿಶ್ವನಾಥ ಪೂಜಾರಿ ಕಡ್ತಲ ಅವರು ಚಿಂತಕ ದಿನೇಶ್ ಅಮೀನ್ ಮಟ್ಟು ಅವರ ವಿರುದ್ಧ ಅವಹೇಳನಕಾರಿ ಮಾತನಾಡಿದ್ದರೆ ಎನ್ನಲಾದ ಆಡಿಯೋ ವೈರಲ್ ಆಗಿದೆ.