ಉಡುಪಿ: ಹಿರಿಯಡ್ಕ ಪ್ರ.ದರ್ಜೆ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ದಶಮಾನೋತ್ಸವದ ಪ್ರಯುಕ್ತ ಹಿರಿಯ ವಿದ್ಯಾರ್ಥಿಗಳ ಕ್ರೀಡಾಕೂಟವನ್ನು ಜ. 27 ರಂದು ನಡೆಯಲಿದೆ. ಪೂರ್ವಾಹ್ನ 9.30ಕ್ಕೆ ಕಾಲೇಜಿನ ಪ್ರಾಂಶುಪಾಲರಾದ ಡಾl ನಿಕೇತನ ಇವರು ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದಾರೆ. ಕಾಲೇಜಿನ ಕ್ರೀಡಾಂಗಣದಲ್ಲಿ ಕೂಟ ನಡೆಯಲಿದೆ. ಕಾಲೇಜಿನ ಹಳೆ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ಕ್ರಿಕೆಟ್, ವಾಲಿಬಾಲ್, ತ್ರೋಬಾಲ್, 100ಮೀ ಓಟ, ರಿಲೆ ಹಾಗೂ ಇನ್ನಿತರ ಸ್ಪರ್ಧೆಗಳು ನಡೆಯಲಿದೆ, ಹಿರಿಯ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಕ್ರೀಡಾಕೂಟದಲ್ಲಿ ಭಾಗವಹಿಸುವಂತೆ ಪ್ರಕಟನೆ ತಿಳಿಸಿದೆ.