ಬೆಳಪುವಿನಲ್ಲಿ ಅಕ್ರಮ ವಲಸಿಗರು?: ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ತನಿಖೆಗೆ ಆಗ್ರಹ

ಉಡುಪಿ: ಕಾಪು ಸಮೀಪದ ಬೆಳಪು ಎಂಬಲ್ಲಿ ಅಕ್ರಮ ವಲಸಿಗರು ನೆಲೆಸಿರುವುದು ಬೆಳಕಿಗೆ ಬಂದಿದ್ದು, ಅಲ್ಲಿನ ನಿವಾಸಿಗಳಿಗೂ ಅವರ ಪರಿಚಯವಿಲ್ಲ. ಈ ಬಗ್ಗೆ ಅಲ್ಲಿನ ಸ್ಥಳೀಯರು ಆತಂಕ ವ್ಯಕ್ತಪಡಿಸುತ್ತಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಹೇಳಿದರು.
ಕಡಿಯಾಳಿಯ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಕರೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದ ಅವರು, ಈ ಬಗ್ಗೆ ಸೂಕ್ತ ತಪಾಸಣೆ ನಡೆಸುವ ಅಗತ್ಯವಿದೆ. ಒಂದು ವೇಳೆ ಅಕ್ರಮವಾಗಿ ನೆಲೆಸಿರುವುದು ಕಂಡು ಬಂದರೆ, ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ದುಷ್ಕರ್ಮಿಗಳು ಬಾಂಬ್‌ ಸ್ಫೋಟಿಸಲು ಯತ್ನಿಸಿರುವುದು ಖಂಡನೀಯ. ಒಂದು ವರ್ಗ ದೇಶವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದೆ. ಇದನ್ನು ಪಕ್ಷಾತೀತವಾಗಿ ಖಂಡಿಸಬೇಕು. ಹಾಗೆಯೇ ಈ ಪ್ರಕರಣವನ್ನು
ಎಲ್ಲ ರಾಜಕೀಯ ಪಕ್ಷಗಳು ಗಂಭೀರವಾಗಿ ಪರಿಗಣಿಸಬೇಕು. ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳಬಾರದು ಎಂದು ಹೇಳಿದರು.