ಉಡುಪಿ : ಕರ್ನಾಟಕ ಸರ್ಕಾರ ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ, ಉಡುಪಿ ಜಿಲ್ಲೆ ಇದರ ಆಶ್ರಯದಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನೆಯ ಅರಿವು ಮೂಡಿಸುವ ಸಲುವಾಗಿ ಬೀದಿನಾಟಕವನ್ನು ಬುಧವಾರ ಕಾರ್ಕಳ ತಾಲೂಕಿನ ಪ್ರಮುಖ ಸ್ಥಳಗಳಲ್ಲಿ ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಕಾರ್ಕಳ ತಹಶೀಲ್ದಾರರು ಹಾಗೂ ತಾಲೂಕು ದಂಡಾಧಿಕಾರಿ ಪುರಂಧರ ಹೆಗ್ಗಡೆ ಉದ್ಘಾಟಿಸಿದರು.
ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಯ ಕುರಿತು, ಮಕ್ಕಳಿಗೆ ಕಡ್ಡಾಯ ಶಿಕ್ಷಣವನ್ನು ನೀಡುವ ಕುರಿತು ನಾಟಕ, ನೃತ್ಯ, ಹಾಡಿನ ಮೂಲಕ ಬೀದಿನಾಟಕವನ್ನು ಸ್ವಸ್ತಿಕ್ ಪ್ರೊಡಕ್ಷನ್ಸ್, ಮುದ್ರಾಡಿ ತಂಡದಿಂದ ಪ್ರದರ್ಶಿಸಲಾಯಿತು.
ಕಾರ್ಕಳ ವೃತ್ತ ಕಾರ್ಮಿಕ ನಿರೀಕ್ಷಕ ಪ್ರಸನ್ನ ಕುಮಾರ್, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಯೋಜನಾ ನಿರ್ದೇಶಕಿ ಪೂರ್ಣಿಮಾ ಭಾನುಪ್ರಕಾಶ್ ಭಾಗವಹಿಸಿದ್ದರು.