ಕರಾವಳಿಯ ಬಂದರುಗಳನ್ನು ಸಮಗ್ರ ರೀತಿಯಲ್ಲಿ ಅಭಿವೃದ್ದಿ ಪಡಿಸುವ ಗುರಿ: ಗೃಹ ಸಚಿವ ಬೊಮ್ಮಾಯಿ

ಉಡುಪಿ : ರಾಜ್ಯದ ಆರ್ಥಿಕತೆಗೆ ಪುಷ್ಠಿ ನೀಡುವ ಕರಾವಳಿಯನ್ನು ಪೂರ್ಣ ಪ್ರಮಾಣದಲ್ಲಿ ಇದುವರೆಗೂ ಬಳಸಿಕೊಳ್ಳಲು ಸಾಧ್ಯವಾಗಿಲ್ಲ, ಕರಾವಳಿಯ ಬಂದರುಗಳನ್ನು ಸಮಗ್ರ ರೀತಿಯಲ್ಲಿ ಅಭಿವೃದ್ದಿ ಪಡಿಸಿ, ಆಮದು ರಫ್ತು ಪ್ರಮಾಣವನ್ನು ಹೆಚ್ಚು ಮಾಡುವ ಮೂಲಕ ಹಾಗೂ ಒಳನಾಡು ಸಾರಿಗೆ ಮತ್ತು ಸಂಪರ್ಕ ರಸ್ತೆಗಳನ್ನು ಅಭಿವೃಧ್ದಿಗೊಳಿಸುವ  ಮೂಲಕ, ಪ್ರವಾಸೋದ್ಯವನ್ನು ದೊಡ್ಡ ಪ್ರಮಾಣದಲ್ಲಿ ಅಭಿವೃದ್ದಿಗೊಳಿಸಿ ಹೆಚ್ಚಿನ ಸಂಖ್ಯೆಯಲ್ಲಿ ದೇಶ ವಿದೇಶದ ಪ್ರವಾಸಿಗರನ್ನು ಆಕರ್ಷಿಸಬೇಕಿದೆ ಎಂದು ರಾಜ್ಯದ ಗೃಹ ಮತ್ತು ಸಹಕಾರ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಅವರು ಭಾನುವಾರ, ಅಜ್ಜರಕಾಡು ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಆಚರಣೆ ಕಾರ್ಯಕ್ರಮದಲ್ಲಿ ದ್ವಜಾರೋಹಣ ನೆರವೇರಿಸಿ, ಗಣರಾಜ್ಯೋತ್ಸವ ಸಂದೇಶ ನೀಡಿ ಮಾತನಾಡಿದರು.
ಇಲ್ಲಿ ಟೆಂಪಲ್, ಟೂರಿಸಂ ಮತ್ತು ಹೆಲ್ತ್ ಟೂರಿಸಂ ಅಭಿವೃಧಿಪಡಿಸಬೇಕು, ಮೀನುಗಾರಿಕೆಯನ್ನು  ಆಧುನಿಕ ತಂತ್ರಜ್ಞಾನ ಮತ್ತು ಉಪಕರಣಗಳನ್ನು ನೀಡುವ ಮೂಲಕ , ಕರಾವಳಿ ಪ್ರದೇಶವನ್ನು ಸಮಗ್ರವಾಗಿ ಅಭಿವೃದ್ದಿಗೊಳಿಸಲು ಚಿಂತನೆ ನಡೆದಿದೆ ಎಂದು ಸಚಿವ ಸಚಿವ ಬಸವರಾಜ ಬೊಮ್ಮಾಯಿ.
ಉಡುಪಿ ಜಿಲ್ಲೆಯಲ್ಲಿ ನೆರೆ ಹಾವಳಿಯಿಂದ ಸಂಭವಿಸಿದ ಹಾನಿಗಾಗಿ  ಪಂಚಾಯತ್ ರಾಜ್ ಇಲಾಖೆಯಿಂದ 29 ಕೋಟಿ ಬಿಡುಗಡೆ ಮಾಡಿದ್ದು, ವಿವಿಧ ಕಾಮಗಾರಿಗಳಿಗಾಗಿ 32 ಕೋಟಿ ಬಿಡುಗಡೆ ಮಾಡಲಾಗಿದೆ.ಜಿಲ್ಲೆಯ 1.90 ಲಕ್ಷ ಕುಟುಂಬಗಳಿಗೆ ಬಿಪಿಎಲ್ ಕಾರ್ಡ್ ವಿತರಿಸಲಾಗಿದ್ದು, ಪ್ರಧಾನ ಮಂತ್ರಿ ಕೃಷಿ ಸಮ್ಮಾನ್  ಯೋಜನೆಯಡಿ 1.39 ಲಕ್ಷ ರೈತರಿಗೆ ಪ್ರೋತ್ಸಾನ ಧನ ನೀಡಲಾಗಿದೆ, ಸಣ್ಣ ನೀರಾವರಿ ಇಲಾಖೆಯಿಂದ 50 ಕೋಟಿ ವೆಚ್ಚದಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣ ಮಾಡಲಾಗುತ್ತಿದೆ, ಎಸ್.ಎಫ್.ಸಿ ಅನುದಾನದ ಮೂಲಕ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅಭಿವೃಧ್ದಿ ನಡೆಸಲಾಗುತ್ತಿದೆ, ವಾರಾಹಿಯಿಂದ ಉಡುಪಿ ನಗರಕ್ಕೆ 24*7 ಕುಡಿಯುವ ನೀರು ಯೋಜನೆಗೆ ಚಾಲನೆ ನೀಡಲಾಗಿದೆ, ಲೋಕೋಪಯೋಗಿ ಇಲಾಖೆ ವತಿಯಿಂದ 157 ಕೋಟಿ ರೂ. ವೆಚ್ಚದಲ್ಲಿ 194 ಕಿಮೀ ರಸ್ತೆ ಪೂರ್ಣಗೊಂಡಿದೆ ಎಂದು ಬೊಮ್ಮಾಯಿ ತಿಳಿಸಿದರು.
ಸರ್ಕಾರವು ದೇಶದ ಶಾಂತಿ ಸುವ್ಯವಸ್ಥೆಗೆ ಮೊದಲ ಪ್ರಾಶಸ್ತ್ಯ ನೀಡಿದ್ದು, ಸರ್ವರಿಗೂ ಸಮಾನತೆ ನೀಡಿದೆ,  ದೇಶದ ಅಭಿವೃಧ್ದಿಯನ್ನು ಕೆಲವು ಶಕ್ತಿಗಳಗೆ ಸಹಿಸಲು ಸಾಧ್ಯವಾಗದೇ , ದೇಶದಲ್ಲಿ ವಿದ್ವಂಸಕ ಕೃತ್ಯ ನಡೆಸುವ ಹುನ್ನಾರ ತೋರುತ್ತಿದ್ದು, ಇದನ್ನು ಸಮರ್ಥವಾಗಿ ಎದುರಿಸಲಾಗಿದೆ, ಅಂತಹ ಯಾವುದೇ ಕೃತ್ಯಗಳಿಗೆ ಅವಕಾಶ ನೀಡದೇ ದೇಶವನ್ನು ಭಯೋತ್ಪಾದನಾ ಮುಕ್ತ ರಾಷ್ಟ್ರವನ್ನಾಗಿ ಮಾಡಲು ಎಲ್ಲರೂ ಸಂಕಲ್ಪ ಮಾಡಬೇಕು ಎಂದು ಸಚಿವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿ ಅತ್ಯುನ್ನತ ಸಾಧನೆ ತೋರಿದ ಸರ್ಕಾರಿ ನೌಕರರಾದ, ಕೃಷಿ ಇಲಾಖೆಯ ಜಂಟಿ ಕೃಷಿ  ನಿರ್ದೇಶಕ ಡಾ. ಎಚ್.  ಕೆಂಪೇಗೌಡ, ಪದನಿಮಿತ್ತ ಭೂದಾಖಲೆಗಳ ಉಪನಿರ್ದೇಶಕ ಹಾಗೂ ಜಿಲ್ಲಾಧಿಕಾರಿಗಳ ತಾಂತ್ರಿಕ ಸಹಾಯಕ ಬಿ.ಕೆ. ಕುಸುಮಾಧರ, ಮೀನುಗಾರಿಕೆ ಉಪನಿರ್ದೇಶಕ ಗಣೇಶ್ ಕೆ., ಜಿ.ಪಂ. ಸಹಾಯಕ ಯೋಜನಾಧಿಕಾರಿ ಜೇಮ್ಸ್ ಡಿಸಿಲ್ವ, ಜಿಲ್ಲಾಧಿಕಾರಿಯವರ ಕಚೇರಿ ಅಧೀಕ್ಷಕ ಕೆ. ರಾಮಮೋಹನ್ ಹೆಬ್ಬಾರ್, ಐ.ಟಿ.ಡಿ.ಪಿ. ಯೋಜನಾ ಸಮನ್ವಯಾಧಿಕಾರಿ ಕಚೇರಿ ಪ್ರಭಾರ ಕಚೇರಿ ಅಧೀಕ್ಷಕ ವಿಶ್ವನಾಥ, ಕಾಪು ಹೋಬಳಿ ಕಂದಾಯ ನಿರೀಕ್ಷಕ ಕೆ. ರವಿಶಂಕರ್, ಕಾಡೂರು ಗ್ರಾ.ಪಂ. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಹೇಶ್ ಕೆ., ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಹಿರಿಯ ಆರೋಗ್ಯ ಸಹಾಯಕ ಬಿ.ವಿ. ಶಿವರಾಮ ರಾವ್, ಪೇತ್ರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಮಂಜುನಾಥ ನಾಯ್ಕ ರವರನ್ನು ಸನ್ಮಾನಿಸಲಾಯಿತು.
ಕೃಷಿ ಪ್ರಶಸ್ತಿ ಯೋಜನೆಯಡಿ ಜಿಲ್ಲಾಮಟ್ಟದಲ್ಲಿ ಪ್ರಶಸ್ತಿ ಪಡೆದ 13 ಮ0ದಿ ರೈತರನ್ನು ಸನ್ಮಾನಿಸಲಾಯಿತು.ಗಣರಾಜ್ಯೋತ್ಸವ ಅಂಗವಾಗಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಿತು.ಪಥ ಸಂಚಲನದಲ್ಲಿ ಉತ್ತಮ ಪ್ರದರ್ಶನ ನೀಡಿದ ತಂಡಗಳನ್ನು ಸನ್ಮಾನಿಸಲಾಯಿತು.
      ಸಮಾರಂಭದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು, ಶಾಸಕ ರಘುಪತಿ ಭಟ್, ಉಡುಪಿ ತಾ.ಪಂ. ಅಧ್ಯಕ್ಷೆ ನೀತಾ ಗುರುರಾಜ ಪೂಜಾರಿ, ಜಿಲ್ಲಾಧಿಕಾರಿ ಜಿ.ಜಗದೀಶ್, ಜಿಪಂ ಸಿಇಓ ಪ್ರೀತಿ ಗೆಹಲೋತ್, ಎಸ್ಪಿ ವಿಷ್ಣುವರ್ಧನ, ಕರಾವಳಿ ಕಾವಲು ಪಡೆಯ ಎಸ್ಪಿ ಚೇತನ್ , ಎಎಸ್‍ಪಿ ಕುಮಾರ ಚಂದ್ರ, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು , ಪೌರಾಯುಕ್ತ ಆನಂದ್ ಕಲ್ಲೋಳಿಕರ್ ಉಪಸ್ಥಿತರಿದ್ದರು.
ಅಲ್ಲಲ್ಲಿ ಗಣರಾಜ್ಯೋತ್ಸವ:
1.  ಉಡುಪಿ ಜಿಲ್ಲಾ ಸರಕಾರಿ ನೌಕರರ ಸಂಘದ ಕಟ್ಟಡದಲ್ಲಿ ಅಧ್ಯಕ್ಷ ಸುಬ್ರಹಣ್ಯ ಶೇರಿಗಾರ್ ಧ್ವಜಾರೋಹಣ ನೆರವೇರಿಸಿದರು. ಉದಯಕುಮಾರ್ ಶೆಟ್ಟಿ , ಪ್ರವೀಣ್ ಕಾಮತ್, ಉಪಸ್ಥಿತರಿದ್ದರು.
2.  ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಡಿಹೆಚ್‍ಓ ಡಾ. ಸುಧೀರ್ ಚಂದ್ರ ಸೂಡಾ ಧ್ವಜಾರೋಹಣ  ನೆರವೇರಿಸಿದರು ಆರ್.ಸಿ.ಹೆಚ್ ಅಧಿಕಾರಿ ಡಾ. ಎಂ.ಜಿ ರಾಮ ,  ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮರಾವ್, ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಹಣ್ಯ ಶೇರಿಗಾರ್, ವೆನ್ಲಾಕ್ ಆಸ್ಪತ್ರೆಯ ಪ್ಯಾರ್ ಮೆಡಿಕಲ್ ಕೋ ಆರ್ಡಿನೇಟರ್ ಸಜನಿ ಓ.ಕೆ. , ಆರೋಗ್ಯ ಮೇಲ್ವಿಚಾರಕ ಆನಂದ ಗೌಡ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.
3.  ಸರಕಾರಿ ನೌಕರರ ವಸತಿ ಗೃಹ ಆವರಣದಲ್ಲಿ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಜಗದೀಶ್ ಭಟ್ ಧ್ವಜಾರೋಹಣ  ನೆರವೇರಿಸಿದರು.  ವಸತಿಗೃಹದ ನಿವಾಸಿಗಳು ಉಪಸ್ಥಿತರಿದ್ದರು.