ಉಡುಪಿ : ಜಿಲ್ಲಾಡಳಿತ ಉಡುಪಿ, ಪ್ರವಾಸೋದ್ಯಮ ಇಲಾಖೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ನಗರಸಭೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನಿರ್ಮಿತಿ ಕೇಂದ್ರ, ಕರಾವಳಿ ಪ್ರವಾಸೋದ್ಯಮ ಸಂಘಟನೆ, ಪಶುಪಾಲನಾ ಇಲಾಖೆ ಹಾಗೂ ಸ್ಥಳೀಯ ಸಂಘ-ಸಂಸ್ಥೆಗಳು ಉಡುಪಿ ಜಿಲ್ಲೆ ರವರ ಸಹಯೋಗದೊಂದಿಗೆ ಕಾಪು ತಾಲೂಕಿನ ಕಾಪು ಬೀಚ್ನಲ್ಲಿ ಫೆಬ್ರವರಿ 8 ಮತ್ತು 9 ರಂದು ಕಾಪು ಲೈಟ್ ಹೌಸ್ ಉತ್ಸವವನ್ನು ಆಚರಿಸಲು ಉದ್ದೇಶಿಸಿದ್ದು, ಕಾರ್ಯಕ್ರಮವನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.