ಕಾರ್ಕಳ: ಭಾರತ ಸರ್ಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಮತ್ತು ಜಿಲ್ಲಾ ಯುವ ಪ್ರಶಸ್ತಿ ವಿಜೇತ ಯುವಕ ಮಂಡಲ ಸಾಣೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಅಂತರ್ ಯುವ ಮಂಡಲಗಳ ಕ್ರೀಡಾಕೂಟ ಪ್ರಕೃತಿ ನ್ಯಾಷನಲ್ ಸ್ಕೂಲ್ ಮೈದಾನ ಸಾಣೂರು ಇಲ್ಲಿ ಪೆಬ್ರವರಿ 16 ರಂದು ನಡೆಯಿತು.
ಅಂತರಾಷ್ಟ್ರೀಯ ಮಾನವ ಹಕ್ಕುಗಳ ಅಯೋಗದ ಕರ್ನಾಟಕ ರಾಜ್ಯ ಕಾರ್ಯಾಧ್ಯಕ್ಷರು ಅಂತರಾಷ್ಟ್ರೀಯ ಕ್ರೀಡಾಪಟು ರೋಹಿತ್ ಕುಮಾರ್ ಕಟೀಲು ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.
ದೈನಂದಿನ ಜೀವನದಲ್ಲಿ ವ್ಯಾಯಾಮ ಅತೀ ಮುಖ್ಯ ಇಂತಹ ಕ್ರೀಡಾಕೂಟದಲ್ಲಿ ಸ್ಪರ್ಧಿಸಿದಾಗ ಹೆಚ್ಚು ಲವಲವಿಕೆಯಿಂದ ಇರಲು ಸಾಧ್ಯ ಎಂದು ಕ್ರೀಡಾಕೂಟಕ್ಕೆ ಶುಭ ಹಾರೈಸಿದರು.
ನೆಹರು ಯುವ ಕೇಂದ್ರ ಉಡುಪಿ ಜಿಲ್ಲಾ ಸಮನ್ವಯಾಧಿಕಾರಿ ವಿಲ್ಪ್ರೇಡ್ ಡಿ ಸೋಜ ಪ್ರಸ್ತಾವಿಕ ಮಾತುಗಳೊಂದಿಗೆ ಶುಭ ಕೋರಿದರು.
ಅಧ್ಯಕ್ಷತೆ ವಹಿಸಿದ್ದ ಮಿಯ್ಯಾರು ಜಿ. ಪಂ ಕ್ಷೇತ್ರದ ಸದಸ್ಯೆ ಶ್ರೀಮತಿ ದಿವ್ಯಶ್ರೀ ಗಿರೀಶ್ ಅಮೀನ್ ಇಂತಹ ಕ್ರೀಡಾಕೂಟಗಳಿಂದ ಸ್ಥಳೀಯ ಕ್ರೀಡಾ ಪ್ರತಿಭೆಗಳಿಗೆ ಸ್ಪೂರ್ತಿ ನೀಡಿದಾಗ ರಾಜ್ಯ ರಾಷ್ಟ್ರ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಲು ಒಂದು ಉತ್ತಮ ಅವಕಾಶ ನೀಡಿದಂತಾಗುತ್ತದೆ ಎಂದರು. ಮಲೇಷಿಯಾದಲ್ಲಿ ನಡೆದ ಯೋಗ ಸ್ಪರ್ಧೆಯಲ್ಲಿ ಭಾರತಕ್ಕೆ ಚಿನ್ನದ ಪದಕ ಗಳಿಸಿದ ಯೋಗ ಪಟು ಅಶೋಕ್ ಕುಮಾರ್ ಮತ್ತು ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಉಮೇಶ್ ಬಜಗೋಳಿ ಇವರನ್ನು ಸನ್ಮಾನಿಸಲಾಯಿತು ಸಾಣೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ರಾಜೇಶ್ವರಿ ಪೂಜಾರಿ, ಪ್ರಕೃತಿ ನ್ಯಾಷನಲ್ ಸ್ಕೂಲ್ ಸಾಣೂರು ಇದರ ಮೇಲ್ವಿಚಾರಕರಾದ ಹರೀಶ್ ಶೆಟ್ಟಿ, ಸತ್ಯಪಾಲ ಹೆಗ್ಡೆ ಮಂಡಲದ ಮಾಜಿ ಅಧ್ಯಕ್ಷರುಗಳಾದ ಮಹೇಶ್ ಕುಮಾರ್ ದೇವಾನಂದ್ ಶೆಟ್ಟಿ, ಜಗದೀಶ್ ಕುಮಾರ್ ಶಂಕರ್ ಶೆಟ್ಟಿ, ಪ್ರಕಾಶ್ ಮಡಿವಾಳ ಉಪಾಧ್ಯಕ್ಷ ಪ್ರಸಾದ್ ಶೆಟ್ಟಿ, ಸದಸ್ಯರಾದ ಪ್ರಕಾಶ್ ರಾವ್, ರಮೇಶ್ ಪೂಜಾರಿ, ಶುಭಕರ್ ಶೆಟ್ಟಿ, ರಾಜೇಶ್ ಪೂಜಾರಿ, ಹರೀಂದ್ರ ಶೆಟ್ಟಿ, ರೋಹಿತ್, ಪ್ರಸನ್ನ ಆಚಾರ್ಯ, ಚಂದ್ರಹಾಸ ಪೂಜಾರಿ, ಪ್ರಭಾಕರ್ ಶೆಟ್ಟಿ ಉಪಸ್ಥಿತರಿದ್ದರು.
ಮಂಡಲದ ಅಧ್ಯಕ್ಷರಾದ ಪ್ರಸಾದ್ ಪೂಜಾರಿ ಸ್ವಾಗತಿಸಿದರು.ಜೊತೆ ಕಾರ್ಯದರ್ಶಿ ಪ್ರಮೀತ್ ಸುವರ್ಣ ವಂದಿಸಿದರು. ಕಾರ್ಯದರ್ಶಿ ಮೋಹನ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.












