ಪ್ರಧಾನಿ ನರೇಂದ್ರ ಮೋದಿ ಸೋಶಿಯಲ್ ಮೀಡಿಯಾ ವೇದಿಕೆಯಿಂದ ಹೊರ ಹೋಗುತ್ತಿದ್ದೇನೆ ಎಂದು ಟ್ವೀಟ್ ಮಾಡುವ ಮೂಲಕ ಅಚ್ಚರಿಯ ವಿಷಯವನ್ನು ತಿಳಿಸಿದ್ದಾರೆ.
ಅವರು ತಮ್ಮ ಟ್ವೀಟರ್ ನಲ್ಲಿ, ಈ ಭಾನುವಾರದಿಂದ ಸಾಮಾಜಿಕ ಜಾಲತಾಣಗಳ ಖಾತೆಗಳಿಂದ ದೂರ ಉಳಿಯಲು ಚಿಂತಿಸುತ್ತಿದ್ದೇನೆ. ಹಾಗೇ ಫೇಸ್ಬುಕ್, ಟ್ವಿಟ್ಟರ್, ಇನ್ಸ್ಟಾಗ್ರಾಂ , ಯೂಟ್ಯೂಬ್ಗಳಿಂದ ದೂರ ಉಳಿಯಲು ಚಿಂತಿಸಿದ್ದೆನೆ. ಮುಂದೆ ಇದರ ಬಗ್ಗೆ ಹೆಚ್ಚಿನ ಮಾಹಿತಿ ನೀಡುತ್ತೇನೆ ಎಂದು ಬರೆದು ಹೇಳಿದ್ದಾರೆ. ಈ ಎರಡು ಸಾಲುಗಳನ್ನು ಬರೆಯುವ ಮೂಲಕ ತಮ್ಮ ವಿಚಾರವನ್ನು ಹಿಂಬಾಲಕರೊಂದಿಗೆ ಮೋದಿ ಹಂಚಿಕೊಂಡಿದ್ದಾರೆ.