ಬೆಂಗಳೂರು: 2020 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯು ಮಾ. 4 ರಿಂದ ಮಾ. 23 ರ ರವರೆಗೆ ನಡೆಯಲಿದ್ದು, ಪರೀಕ್ಷೆ ಬರೆಯುವ ಎಲ್ಲಾ ವಿದ್ಯಾರ್ಥಿಗಳಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಶುಭಕೋರಿದ್ದಾರೆ.
ಸಿಎಂ ಅವರು ಟ್ವೀಟರ್ ನಲ್ಲಿ “ವಿದ್ಯಾರ್ಥಿ ಜೀವನದ ಬಹು ಮುಖ್ಯ ಘಟ್ಟವಾದ ದ್ವಿತೀಯ ಪಿಯು ಅಂತಿಮ ಪರೀಕ್ಷೆಗೆ ಹಾಜರಾಗುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಶುಭಾಶಯಗಳು. ನಿಮ್ಮೆಲ್ಲರ ಅಗಣಿತ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿ, ಭವಿಷ್ಯ ಉಜ್ವಲವಾಗಲಿ ಎಂದು ಹಾರೈಸುತ್ತೇನೆ” ಎಂದು ಬರೆದುಕೊಂಡಿದ್ದಾರೆ.
ವಿದ್ಯಾರ್ಥಿಗಳು ಈಗಾಗಲೇ ಪರೀಕ್ಷೆ ಬರೆಯಲು ತಯಾರಗಿದ್ದು, ಇದಕ್ಕಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ. ವಿದ್ಯಾರ್ಥಿಗಳಲ್ಲಿ ಇರುವಂತಹ ಆತಂಕ, ಅನುಮಾನಗಳನ್ನು ಹೋಗಲಾಡಿಸಲು ಪದವಿ ಪೂರ್ವ ಶಿಕ್ಷಣ ಇಲಾಖೆ ಅನೇಕ ಕಾರ್ಯಗಾರ ಮತ್ತು ನೇರ ಪೋನ್ ಇನ್ ಕಾರ್ಯಕ್ರಮಗಳನ್ನು ಕೂಡ ಮಾಡಿಕೊಂಡಿದೆ.
ರಾಜ್ಯದ ಶಿಕ್ಷಣ ಸಚಿವರು ಕೂಡ ಪರೀಕ್ಷೆ ಬರೆಯುವ ವಿಧ್ಯಾರ್ಥಿಗಳಿಗೆ ಯಾವುದೇ ರೀತಿ ಸಮಸ್ಯೆಯಾಗದಂತೆ ನಡೆಸಲು ಸೂಚನೆ ನೀಡಿದೆ.