ಕುಂದಾಪುರ : ಬೆಂಗಳೂರಿನ ಜೆ.ಸಿ ರಸ್ತೆಯಲ್ಲಿ ಇರುವ ಎ.ಡಿ.ಎ ರಂಗಮಂದಿರದಲ್ಲಿ ಬೆಂಗಳೂರಿನ ಅಂತರಾಷ್ಟ್ರೀಯ ಸಾಮಾಜಿಕ ಹಾಗೂ ಆರ್ಥಿಕ ಸುಧಾರಣಾ ಸಂಸ್ಥೆಯ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಬೋಧನೆ, ಸಂಶೋಧನೆ ಹಾಗೂ ಪ್ರಕಟಣೆಗಾಗಿ ನೀಡಲಾಗುವ ಪ್ರತಿಷ್ಠಿತ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಜೀವಮಾನ ಸಾಧನೆಯ ರಾಷ್ಟ್ರೀಯ ಪ್ರಶಸ್ತಿಯನ್ನು ಪ್ರಾಧ್ಯಾಪಕ ಎನ್.ನಿತ್ಯಾನಂದ ಅವರಿಗೆ ನೀಡಿ ಗೌರವಿಸಲಾಗಿದೆ.
ರಾಷ್ಟ್ರೀಯ ನೀತಿ ಆಯೋಗದ ಮಾಜಿ ಆರ್ಥಿಕ ಸಲಹೆಗಾರ, ನಿವೃತ್ತ ಐಎಫ್ಎಸ್ ಅಧಿಕಾರಿ ಡಾ.ಎಚ್.ವಿ.ಶಿವಪ್ಪ ಪ್ರಶಸ್ತಿ ಪ್ರದಾನ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಬೆಂಗಳೂರಿನ ರಾಯರ್ಅಕಾಡೆಮಿ ಆಫ್ ಗ್ಲೋಬಲ್ ಪೀಸ್ ಇದರ ಅಧ್ಯಕ್ಷ ಡಾ.ಆರ್.ಕೆ.ಸ್ಯಾಮ್ಸನ್, ಚಲನಚಿತ್ರ ಕಲಾವಿದರಾದ ವಿರೆನ್ಕೇಶವ್ ಹಾಗೂ ಅಕ್ಷತಾ ಮಾಧವ ಇದ್ದರು.