ಕುಂದಾಪುರ, ಮಾರ್ಚ್ 10 : ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಮತ್ತು ನಿರ್ವಹಣಾ ಶಾಸ್ತ್ರ ವಿಭಾಗ ಹಾಗೂ ಶ್ರೀ ಶಾರದಾ ಕನ್ಸೆಲ್ಟೆನ್ಸಿ ಸರ್ವಿಸಸ್, ಆದಾಯ ತೆರಿಗೆ ಪಾನ್ ಕಾರ್ಡ್ ಸೆಂಟರ್, ಕುಂದಾಪುರ ಇದರ ವತಿಯಿಂದ ವಿದ್ಯಾರ್ಥಿಗಳಿಗೆ 2 ದಿನಗಳ ಕಾಲ ಪಾನ್ ಕಾರ್ಡ್ ಮೇಳ ಮತ್ತು ಅರಿವು ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಕೊತ್ತಾಡಿ ಉಮೇಶ್ ಶೆಟ್ಟಿ, ಉಪ ಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ, ವಾಣಿಜ್ಯ ವಿಭಾಗದ ಮುಖ್ಯಸ್ಥ ರಾಜೇಶ್ ಶೆಟ್ಟಿ ವಕ್ವಾಡಿ ಹಾಗೂ ಶ್ರೀ ಶಾರದಾ ಕನ್ಸೆಲ್ಟೆನ್ಸಿ ಸರ್ವಿಸ್ನ ನರ್ಮದಾ ಎಸ್. ಪ್ರಭು ಉಪಸ್ಥಿತರಿದ್ದರು.