ನಿಟ್ಟೆ: ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಮಹಿಳಾ ಸಿಬ್ಬಂದಿಗಳು ಇತ್ತೀಚೆಗೆ ವಿಶ್ವಮಹಿಳಾ ದಿನವನ್ನು ಸಂಸ್ಥೆಯಲ್ಲಿ ಆಚರಿಸಿದರು. ಉದ್ಯಾವರದ ಎಸ್.ಡಿ.ಎಂ ಆಯುರ್ವೇದ ಕಾಲೇಜಿನ ಪ್ರೊಫೆಸರ್ ಡಾ.ಚೈತ್ರಾ ಹೆಬ್ಬಾರ್ ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ನಿರಂಜನ ಎನ್ ಚಿಪ್ಳೂಣ್ಕರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಉಪಪ್ರಾಂಶುಪಾಲರಾದ ಡಾ.ಐ.ಆರ್ ಮಿತ್ತಂತಾಯ, ಡಾ. ಶ್ರೀನಿವಾಸ ರಾವ್ ಬಿ.ಆರ್, ರಿಜಿಸ್ಟ್ರಾರ್ ಪ್ರೊ.ಯೋಗೀಶ್ ಹೆಗ್ಡೆ, ವಿವಿಧ ವಿಭಾಗದ ಮುಖ್ಯಸ್ಥರು ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಉಡುಪಿಯ ಬೀಡಿನಗುಡ್ಡೆಯ ರುದ್ರಭೂಮಿಯಲ್ಲಿ ಕಾವಲುಗಾರ್ತಿಯಾಗಿರುವ ವನಜಾ ಪೂಜಾರ್ತಿ, ನಿಟ್ಟೆ ಸಂಸ್ಥೆಯಲ್ಲಿ ಶುಚಿತ್ವದ ಕೆಲಸ ಮಾಡುವ ಲೀಲಾ ಭಂಡಾರ್ತಿ, ನಿಟ್ಟೆಯ ನಾಟಿವೈದ್ಯೆ ರಮಣಿ ಸದಾಶಿವ ಆಚಾರ್ಯ ಹಾಗೂ ನಿಟ್ಟೆಯ ಅಂಬಡೆಕಲ್ಲಿನ ಯೋಗ ಕ್ಷೇತ್ರದಲ್ಲಿ ಸಾಧನೆಗೈದ ನಾಝಿಯಾ ಅವರನ್ನು ಸನ್ಮಾನಿಸಲಾಯಿತು.












