ಉಡುಪಿ: ಕುಂದಾಪುರ ತಾಲ್ಲೂಕಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ನಿರಾಕರಿಸಿ ಪರಾರಿಯಾಗಿದ್ದ ಕೊರೊನಾ ಶಂಕಿತ ವ್ಯಕ್ತಿಯನ್ನು ಪೊಲೀಸರು ಪತ್ತೆಹಚ್ಚಿ ಮತ್ತೆ ವೈದ್ಯರ ಮುಂದೆ ಹಾಜರುಪಡಿಸಿದ್ದಾರೆ.
ಆತನಿಗೆ ಕಡ್ಡಾಯ ಹೋಂ ಕ್ವಾರಂಟೈನ್ ವಿಧಿಸಲಾಗಿದ್ದು, ಸಾರ್ವಜನಿಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಸ್ಪಷ್ಟಪಡಿಸಿದ್ದಾರೆ.