ಮಾರ್ಚ್ 31ರ ವರೆಗೆ ಲಾಕ್ ಡೌನ್ ಆಗಲಿದೆಯಾ ಕರ್ನಾಟಕ: ಕೊರೊನಾ ಸೋಂಕು ಹರಡುವಿಕೆ ತಡೆಗೆ ರಾಜ್ಯ ಸರ್ಕಾರ ಕಠಿಣ ನಿರ್ಧಾರ ಕೈಗೊಳ್ಳಲು ಚಿಂತನೆ

ಬೆಂಗಳೂರು: ಮಹಾಮಾರಿ ಕೋವಿಡ್ 19 (ಕೊರೊನಾ) ವೈರಸ್ ಹರಡುವುದನ್ನು ತಡೆಗಟ್ಟುವ ಸಲುವಾಗಿ ಇಡೀ ಕರ್ನಾಟಕ ರಾಜ್ಯವನ್ನು ಮಾರ್ಚ್ 31ರ ವರೆಗೆ ಲಾಕ್ ಡೌನ್ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದ್ದು, ಸಂಜೆ ಅಧಿಕೃತವಾಗಿ ಘೋಷಣೆ ಮಾಡುವ ಸಾಧ್ಯತೆ ಇದೆ.
ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೊರೊನಾ ವೈರಸ್ ಗೆ ಸಂಬಂಧಿಸಿದಂತೆ ಮುನ್ನೆಚ್ಚರಿಕೆಯ ದೃಷ್ಠಿಯಿಂದ ಹೊರಡಿಸಿದ್ದ ಆದೇಶಗಳನ್ನು ಜನರು ದಿಕ್ಕರಿಸಿ, ಅನಗತ್ಯವಾಗಿ ಓಡಾಟ ನಡೆಸುತ್ತಿದ್ದಾರೆ. ಇದರಿಂದ ಮತ್ತಷ್ಟು ಸೋಂಕು ಹರಡುವ ಭೀತಿ ಎದುರಾಗಿದೆ. ಈಗಾಗಲೇ ಬೆಂಗಳೂರು ಸೇರಿದಂತೆ ಸೋಂಕು ದೃಢಪಟ್ಟ 9 ಜಿಲ್ಲೆಗಳನ್ನು ಲಾಕ್ ಡೌನ್ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಆದರೂ ಜನರ ಸಂಚಾರ ನಿಂತಿಲ್ಲ. ಹಾಗಾಗಿ ಸರ್ಕಾರ ಇಡೀ ರಾಜ್ಯವನ್ನೇ ಲಾಕ್ ಡೌನ್ ಮಾಡಿ, ಕೊರೊನಾ ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ಚಿಂತನೆ ನಡೆಸಿದೆ ಎನ್ನಲಾಗುತ್ತಿದೆ. ಅಲ್ಲದೆ ಇದು ಸರ್ಕಾರಕ್ಕೆ ಅನಿವಾರ್ಯತೆ ಕೂಡ ಆಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
ರಾಜ್ಯ ಒಂದು ವೇಳೆ ಲಾಕ್ ಡೌನ್ ಆದರೆ, ಅಗತ್ಯವಸ್ತು ಹೊರತುಪಡಿಸಿ ಉಳಿದೆಲ್ಲವೂ ಬಂದ್ ಆಗಲಿದೆ.