ಕೊರೋನಾ ವೈರಸ್: ರಾಜ್ಯದಲ್ಲಿ ಒಂದೇ ದಿನ 7 ಪ್ರಕರಣಗಳು ಪತ್ತೆ

ಬೆಂಗಳೂರು ಮಾ.23: ಕೊರೋನಾ ಮಹಾಮಾರಿಗೆ ರಾಜ್ಯದಲ್ಲಿ ಒಂದೇ ದಿನ 7 ಕೊರೋನಾ ವೈರಸ್ ಪ್ರಕರಣಗಳು ದಾಖಲಾಗಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 33ಕ್ಕೆ ಏರಿಕೆಯಾಗಿದೆ.

ಈ ಬಗ್ಗೆ  ಕೇಂದ್ರ ಆರೋಗ್ಯ ಇಲಾಖೆ ಖಚಿತಪಡಿಸಿದ್ದು, ನಿನ್ನೆ 6 ಜನರಲ್ಲಿ ಕೊರೋನಾ ಸೋಂಕು ಪತ್ತೆಯಾಗಿತ್ತು. ಇವತ್ತು ಒಟ್ಟು 7 ಕೊರೋನಾ ಕೇಸ್‌ಗಳು ಪತ್ತೆಯಾಗಿವೆ.

ಈ ಮೂಲಕ ಮಹಾರಾಷ್ಟ್ರ (71) ಮೊದಲ ಸ್ಥಾನದಲ್ಲಿದ್ದು, ಕೇರಳ (60) 2ನೇ ಸ್ಥಾನದಲ್ಲಿದೆ ಹಾಗೂ ಕರ್ನಾಟಕ (33) 3ನೇ ಸ್ಥಾನಕ್ಕೇರಿದೆ.