ಮಣಿಪಾಲ: ಶಿವಮೊಗ್ಗ ಜಿಲ್ಲೆಯ ಸಾಗರ ಹಾಗೂ ಆಸುಪಾಸಿನ ಸುಮಾರು 57 ಜನರು ಶಂಕಿತ ಮಂಗನ ಕಾಯಿಲೆ ತುತ್ತಾಗಿದ್ದಾರೆ ಎಂದು ಹೇಳಲಾಗುತ್ತಿದ್ದು ಈ ರೋಗಕ್ಕೆ ಚಿಕಿತ್ಸೆ ಪಡೆಯಲು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇವರಲ್ಲಿ ಸುಮಾರು 19 ಜನರಿಗೆ ಮಂಗನ ಕಾಯಿಲೆ ಇರುವ ಬಗ್ಗೆ ವರದಿಯಾಗಿದೆ. ಇದರಲ್ಲಿ 4 ಜನ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆ ಪಡೆದು ಬಿಡುಗಡೆ ಹೊಂದಿದ್ದಾರೆ. 15 ಜನ ಆಸ್ಪತ್ರೆಯಲ್ಲಿ ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಈ ಮಂಗನ ಕಾಯಿಲೆಯಿಂದ ಯಾರೂ ಕೂಡ ಸಾವನ್ನಪ್ಪಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ.