ಉಡುಪಿ: ಉಡುಪಿ: ಜಿಲ್ಲೆಯಲ್ಲಿ ಮೊದಲ ಕೊರೊನಾ ಪ್ರಕರಣ ಪತ್ತೆಯಾಗಿದ್ದು, ದುಬೈನಿಂದ ಮಾರ್ಚ್ 18ರಂದು ಮರಳಿದ್ದ 32 ವರ್ಷದ ವ್ಯಕ್ತಿಯಲ್ಲಿ ಕೊರೊನಾ ಸೋಂಕು ಇರುವುದು ಪ್ರಾಥಮಿಕ ವರದಿಯಲ್ಲಿ ದೃಢಪಟ್ಟಿದೆ ಎಂದು ಡಿಎಚ್ ಒ ಸುಧೀರ್ ಚಂದ್ರ ಸೂಡಾ ತಿಳಿಸಿದ್ದಾರೆ.
ದುಬೈನಿಂದ ಬಂದಿದ್ದ ವ್ಯಕ್ತಿಯಲ್ಲಿ ಮಾರ್ಚ್ 18 ರಂದು ದುಬೈ ಜ್ವರದ ಲಕ್ಷಣ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಮಾರ್ಚ್ 23ರಂದು ನಿಂದ ಬಂದಿದ್ದ ಉಡುಪಿ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ವ್ಯಕ್ತಿ ಗಂಟಲಿನ ದ್ರವ ಹಾಗೂ ರಕ್ತದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಿದ್ದು, ವೈದ್ಯಕೀಯ ವರದಿಯಲ್ಲಿ ಕೊರೊನಾ ಪಾಸಿಟಿವ್ ಎಂದು ಖಚಿತಗೊಂಡಿದೆ ಎಂದು ಡಿಎಚ್ ಒ ಮಾಹಿತಿ ನೀಡಿದ್ದಾರೆ.












