ಉಡುಪಿ: ಜಿಲ್ಲಾ ಮಲೆಕುಡಿಯ ಸಂಘ(ರಿ.),ಉಡುಪಿ ಇದರ 8ನೇ ವರ್ಷದ ವಾರ್ಷಿಕೋತ್ಸವವು ಮಾ.29 ಆದಿತ್ಯವಾರದಂದು ನಡೆಯಬೇಕಿತ್ತು. ಆದರೆ ಕೊರೊನಾ ವೈರಸ್ ನ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರವು 21 ದಿನಗಳ ಕಾಲ ಲಾಕ್ ಡೌನ್ ಘೋಷಣೆಯ ಹಿನ್ನೆಲೆಯಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ಉಡುಪಿ ಜಿಲ್ಲಾ ಮಲೆಕುಡಿಯ ಸಂಘದ ಆಡಳಿತ ಮಂಡಳಿ ಪ್ರಕಟಣೆ ತಿಳಿಸಿದೆ.