ಉಡುಪಿ ಏ.2: ರಾಜ್ಯದಲ್ಲಿ ಕೊರೋನಾ ನಿಯಂತ್ರಣ ಕುರಿತು ಸರ್ಕಾರ ಕೈಗೊಂಡಿರುವ ಕಾರ್ಯಗಳಿಗಾಗಿ ಉಡುಪಿ ನಿರ್ಮಿತಿ ಕೇಂದ್ರದಿಂದ 1 ಕೋಟಿ ರೂ ಗಳ ಚೆಕ್ ನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಗುರುವಾರ ನೀಡಲಾಯಿತು.
ಉಡುಪಿ ಪ್ರೆಸ್ ಕ್ಲಬ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ , ಉಡುಪಿ ನಿರ್ಮಿತಿ ಕೇಂದ್ರದ ಅಧ್ಯಕ್ಷರು ಹಾಗೂ ಜಿಲ್ಲಾದಿಕಾರಿ ಜಿ.ಜಗದೀಶ್ ಮತ್ತು ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಅರುಣ್ ಕುಮಾರ್ ಚೆಕ್ ನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ಅರ್ಪಿಸಿದರು.
ನಂತರ ಮಾತನಾಡಿದ ಜಿಲ್ಲಾಧಿಕಾರಿ ಜಿ.ಜಗದೀಶ್, ನಿರ್ಮಿತಿ ಕೇಂದ್ರದ ಲಾಭಾಂಶದಲ್ಲಿ 1 ಕೋಟಿ ರೂ ಗಳನ್ನು ಕೊರೋನಾ ನಿಯಂತ್ರಣ ಕುರಿತು ಸರ್ಕಾರದ ಕಾರ್ಯಗಳಿಗೆ ನೆರವಾಗಲು ನೀಡಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ವಾರ್ತಾಧಿಕಾರಿ ಬಿ.ಎ. ಖಾದರ್ ಷಾ ಉಪಸ್ಥಿತರಿದ್ದರು.