ಬಾಲಿವುಡ್ ನಟ ವಿವೇಕ್ ಒಬೆರಾಯ್ ನಟಿಸುತ್ತಿರುವ ಮೋದಿ ಬಯೋಪಿಕ್ ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗಿದೆ. ಬಾಲಿವುಡ್ ವಿಶ್ಲೇಷಕ ತರಣ್ ಆದರ್ಶ್ ಟ್ವಿಟ್ಟರ್ ಖಾತೆಯಲ್ಲಿ ಮೋದಿ ಬಯೋಪಿಕ್ ಫಸ್ಟ್ ಲುಕ್ ಬಹಿರಂಗಪಡಿಸಿದ್ದು, ವಿವೇಕ್ ಒಬೆರಾಯ್ ಅವರ ಮೊದಲ ನೋಟ ನೋಡುಗರನ್ನು ಆಶ್ಚರ್ಯಗೊಳಿಸಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಮೋದಿ ಚಿತ್ರದ ಫಸ್ಟ್ ಲುಕ್ ರಿಲೀಸ್ ಮಾಡಿದ್ದಾರೆ, ಈ ಸಿನಿಮಾ 23 ಭಾಷೆಯಲ್ಲಿ ರಿಲೀಸ್ ಆಗಲಿದೆ.
ಓಮಂಗ್ ಕುಮಾರ್ ಈ ಚಿತ್ರವನ್ನು ನಿರ್ದೇಶನ ಮಾಡಿದ್ದು, ಸಂದೀಪ್ ಎಸ್ ಸಿಂಗ್ ನಿರ್ಮಾಣ ಮಾಡುತ್ತಿದ್ದಾರೆ. ‘ಪ್ರಧಾನಿ ನರೇಂದ್ರ ಮೋದಿ ಬಯೋಪಿಕ್’ ಕುರಿತಂತೆ ದೇಶದ ಹಲವು ಕಡೆ ಚಿತ್ರೀಕರಣ ನಡೆಯಲಿದೆ. ಗುಜರಾತ್, ದೆಹಲಿ, ಉತ್ತರಖಂಡ್, ಹಿಮಾಚಲ್ ಪ್ರದೇಶಗಳಲ್ಲಿ ಚಿತ್ರೀಕರಣ ನಡೆಸಲು ನಿರ್ಧರಿಸಲಾಗಿದೆ.