ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಮೂರು ಮಂದಿಗೆ ಕೊರೊನಾ ಸೋಂಕು ದೃಡಪಟ್ಟಿದ್ದು, ಕೊರೊನಾ ಪೀಡಿತರ ಸಂಖ್ಯೆ 28 ಕ್ಕೆ ಏರಿಕೆಯಾಗಿದೆ.
P 536 ಸಂಖ್ಯೆಯ ರೋಗಿ ಸಂಪರ್ಕದಲ್ಲಿ ಇದ್ದ ಮಂಗಳೂರಿನ ಬೋಳಾರದ 38 ವರ್ಷದ ಮಹಿಳೆ ಹಾಗೂ 11 ವರ್ಷದ ಬಾಲಕಿಯ ಗಂಟಲು ದ್ರವ ಮಾದರಿಯ ವರದಿ ಇಂದು ಸ್ವೀಕೃತಗೊಂಡಿದ್ದು, ವರದಿಯಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.
P390 ಸಂಖ್ಯೆಯ ರೋಗಿ ಸಂಪರ್ಕದ ಇದ್ದ 16 ವರ್ಷದ ಬಾಲಕಿಗೂ ಕೊರೊನಾ ಸೋಂಕು ದೃಢಪಟ್ಟಿದೆ.
ಸೋಂಕಿತ ಮೂರು ಮಂದಿಗೂ ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದುವರೆಗೆ 28 ಮಂದಿಗೆ ಕೊರೊನಾ ದೃಢಪಟ್ಟಿದ್ದು ಇದರಲ್ಲಿ 12 ಮಂದಿ ಗುಣಮುಖರಾಗಿ 3 ಸಾವನ್ನಪ್ಪಿದ್ದರು. 13 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.