ಬೆಂಗಳೂರು: ಕೊರೊನಾ ಅಟ್ಟಹಾಸಕ್ಕೆ ರಾಜ್ಯದಲ್ಲಿ ಮೇ 9ರ ಸಂಜೆ 5 ಗಂಟೆಯಿಂದ ಮೇ 10ರ ಸಂಜೆ 5 ಗಂಟೆವರೆಗೂ 54 ಹೊಸ ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಭಾನುವಾರ ತಿಳಿಸಿದೆ.
ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಒಟ್ಟು ಸಂಖ್ಯೆ 848ಕ್ಕೆ ಏರಿಕೆಯಾಗಿದೆ. ಪ್ರಸ್ತುತ 388 ರೋಗಿಗಳು ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಲ್ಲಿ ಆರು ಜನರನ್ನು ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ.
ಒಟ್ಟು ಪ್ರಕರಣದಲ್ಲಿ 31 ಮಂದಿ ಸಾವಿಗೀಡಾಗಿದ್ದು, 422 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಹೊಸದಾಗಿ ಕೋವಿಡ್–19 ಸೋಂಕು ಪ್ರಕರಣಗಳು:
ಬೆಂಗಳೂರು – 3, ಭಟ್ಕಳ- 7, ಚಿಕ್ಕಬಳ್ಳಾಪುರ- 1, ಕಲಬುರಗಿ -4, ಶಿವಮೊಗ್ಗ- 8, ಬೆಳಗಾವಿ- 22, ಬಾಗಲಕೋಟೆ- 8 ಮತ್ತು ದಾವಣಗೆರೆ- 1 ಪ್ರಕರಣಗಳು ಪತ್ತೆಯಾಗಿದೆ.