ಉಡುಪಿ: ಜಿಲ್ಲೆಯಲ್ಲಿ ಇಂದು ಮತ್ತೆ ನಾಲ್ಕು ಹೊಸ ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾಗಿದೆ. ಕೊರೊನಾ ಸೋಂಕಿತ ನಾಲ್ಕು ಮಂದಿ ಕೂಡ ಮುಂಬೈನಿಂದ ಜಿಲ್ಲೆಗೆ ಆಗಮಿಸಿದ್ದವರಾಗಿದ್ದಾರೆ .
ಮಧ್ಯಾಹ್ನ ಬಿಡುಗಡೆಗೊಂಡ ರಾಜ್ಯ ಕೊರೊನಾ ಬುಲೆಟಿನ್ ನಲ್ಲಿ ಮಾಹಿತಿ ತಿಳಿದುಬಂದಿದೆ.
ಸೋಂಕಿತರೆಲ್ಲರೂ ಮಹಾರಾಷ್ಟ್ರದ ಮುಂಬೈನಿಂದ ಜಿಲ್ಲೆಗೆ ಪ್ರಯಾಣ ಬೆಳೆಸಿದ್ದವರಾಗಿದ್ದಾರೆ. 24 ಯುವಕ, 24 ವರ್ಷದ ಯುವತಿ, 8 ವರ್ಷದ ಬಾಲಕ ಹಾಗೂ 38 ವರ್ಷದ ವ್ಯಕ್ತಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಸೋಂಕಿತರೆಲ್ಲರನ್ನು ನಗರದ ಡಾ. ಟಿಎಂಎ ಪೈ ಕೋವಿಡ್ ಆಸ್ಪತ್ರೆಯ ಐಸೋಲೇಷನ್ ವಾರ್ಡ್ ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಇಲಾಖೆಯ ಮೂಲಗಳಿಂದ ತಿಳಿದುಬಂದಿದೆ.