ಉಡುಪಿ: ಕರ್ನಾಟಕ ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ದೇವಸ್ಥಾನಗಳ ಸಹಿತ ಎಲ್ಲಾ ದೇವಸ್ಥಾನಗಳನ್ನು ಜೂನ್ 8 ರಂದು ತೆರೆದು ಭಕ್ತರಿಗೆ ಪೂಜೆ ಪುನಸ್ಕಾರ ಮತ್ತು ದರ್ಶನಕ್ಕೆ ಅವಕಾಶ ನೀಡಲಾಗುವುದು ಎಂದು ಮುಜರಾಯಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ದೇವಸ್ಥಾನಗಳಲ್ಲಿ ಸಾರ್ವಜನಿಕರಿಗೆ ಪೂಜೆ ಮಾಡಲು ಅವಕಾಶ ಕಲ್ಪಿಸುವ ಬಗ್ಗೆ ಈ ಮೊದಲು ಜೂನ್ 1ಕ್ಕೆ ತೀರ್ಮಾನಿಸಲು ಉದ್ದೇಶಿಸಲಾಗಿತ್ತು. ಆದರೆ ಕೇಂದ್ರ ಸರ್ಕಾರ ನೀಡಿರುವ ನೂತನ ಮಾರ್ಗಸೂಚಿಯಂತೆ ಜೂನ್ 8 ಕ್ಕೆ ಮುಂದೂಡಲಾಗಿದೆ ಎಂದು ಹೇಳಿದ್ದಾರೆ.
ಜೂ. 8ರಂದು ಮಾಸ್ಕ್ ಧರಿಸಿ, ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಹಾಗೂ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ದೇವಸ್ಥಾನಗಳನ್ನು ತೆರೆಯಲಾಗುವುದು. ಇಲಾಖಾ ಅಧಿಕಾರಿಗಳಿಗೆ ಮಾರ್ಗಸೂಚಿ ತಯಾರಿಸಲು ಸೂಚನೆ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.