ಮಂಗಳೂರು: ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಅರಂತೋಡುವಿನಲ್ಲಿ ನಡೆದ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ 62 ಮಂದಿಗೆ ಕ್ವಾರೆಂಟೈನ್ ಮಾಡಲಾಗಿದೆ.
ಕೊರೋನಾ ಸೋಂಕಿತನ ಪ್ರಾಥಮಿಕ ಸಂಪರ್ಕ ಹೊಂದಿದ್ದ ವ್ಯಕ್ತಿ ಮದುವೆಯಲ್ಲಿ ಭಾಗವಹಿಸಿದ್ದು, ಈ ಹಿನ್ನೆಲೆಯಲ್ಲಿ ಕ್ವಾರಂಟೈನ್ ಮಾಡಲಾಗಿದೆ.
ಆರೋಗ್ಯ ಇಲಾಖೆ ದ್ವಿತೀಯ ಸಂಪರ್ಕದ 62 ಮಂದಿಯನ್ನು ಹೋಂ ಕ್ವಾರೆಂಟೈನ್ ಮಾಡಿದೆ. ಮಲೇಷಿಯಾದಿಂದ ಬಂದಿದ್ದ ವೈದ್ಯರೊಬ್ಬರಿಗೆ ಪಾಸಿಟಿವ್ ಆಗಿತ್ತು. ಅವರು ಭಾನುವಾರ ಅರಂತೋಡುವಿನ ತಮ್ಮ ಸಂಬಂಧಿಕರ ಮನೆಗೆ ಬಂದಿದ್ದರು.
ಆ ಮನೆಯಲ್ಲಿ ವೈದ್ಯರ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದ ವ್ಯಕ್ತಿ ಮದುವೆಯಲ್ಲಿ ಭಾಗಿಯಾಗಿದ್ದಾರೆ. ಮೇ.22ರಂದು ಮಲೇಷಿಯಾದಿಂದ ಬೆಂಗಳೂರಿಗೆ ಬಂದು ಸರ್ಕಾರಿ ಕ್ವಾರೆಂಟೈನ್ ಮುಗಿಸಿದ್ದ ವೈದ್ಯ, ಆ ಬಳಿಕ ಅಲ್ಲಿಂದ ಮಂಗಳೂರಿಗೆ ಬಂದಿದ್ದು, ಪರೀಕ್ಷೆ ವೇಳೆ ಪಾಸಿಟಿವ್ ಬಂದಿತ್ತು.