ಕಾರ್ಕಳ: ಭಾರತ ಸರ್ಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಉಡುಪಿ ಮತ್ತು ಯುವಕ ಮಂಡಲ ಸಾಣೂರು (ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಮತ್ತು ಜಿಲ್ಲಾ ಅತ್ಯುತ್ತಮ ಯುವ ಮಂಡಲ ಪ್ರಶಸ್ತಿ ವಿಜೇತ ಸಂಸ್ಥೆ) ಇವುಗಳ ಜಂಟಿ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಯುವಕ ಮಂಡಲದ ಎದುರು ರಾಷ್ಟ್ರೀಯ ಹೆದ್ದಾರಿ ಬಳಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಸುಮಾರು 30 ವಿವಿಧ ಬಗೆಯ ಗಿಡಗಳನ್ನು ನೆಡಲಾಯಿತು ಮತ್ತು ಗಿಡಗಳ ರಕ್ಷಣೆ ಬಗ್ಗೆ ಮಂಡಲದ ಸದಸ್ಯರಿಗೆ ಜವಾಬ್ದಾರಿ ನೀಡಲಾಯಿತು. ಕಾರ್ಯಕ್ರಮದಲ್ಲಿ ಮಂಡಲದ ಅಧ್ಯಕ್ಷ ಪ್ರಸಾದ್ ಪೂಜಾರಿ, ಕಾರ್ಯದರ್ಶಿ ಮೋಹನ್ ಶೆಟ್ಟಿ, ಮಾಜಿ ಅಧ್ಯಕ್ಷರಾದ ಜಗದೀಶ್ ಕುಮಾರ್, ಶಂಕರ್ ಶೆಟ್ಟಿ, ಪ್ರಕಾಶ ಮಡಿವಾಳ, ಉಪಾಧ್ಯಕ್ಷ ಪ್ರಸಾದ್ ಶೆಟ್ಟಿ, ಕೋಶಾಧಿಕಾರಿ ರಾಜೇಶ್ ಪೂಜಾರಿ, ಸದಸ್ಯರುಗಳಾದ ಪ್ರಶಾಂತ್ ಶೆಟ್ಟಿ, ಅನಿಲ್ ಕೋಟ್ಯಾನ್, ಸುಮುಖ್ ನಾಯಕ್, ಹರೀಶ್ ರಾವ್, ಜಗನ್ನಾಥ ಶೆಟ್ಟಿ, ಪ್ರಶಾಂತ್ ಆಚಾರ್ಯ, ಸಮಿತ್ ಉಪಸ್ಥಿತರಿದ್ದರು.