ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚ ಅಧ್ಯಕ್ಷರಾಗಿ ವೀಣಾ ಎಸ್ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ.
ವಿವಿಧ ಸಂಘಟನೆ ಹಾಗೂ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡ ಅವರು ಈ ಹಿಂದೆ ಜಿಲ್ಲಾ ಮಹಿಳಾ ಮೋರ್ಚಾದ ಕಾರ್ಯದರ್ಶಿಯಾಗಿದ್ದರು.
ಕಳೆದ ಹಲವು ವರ್ಷಗಳಿಂದ ಬಿಜೆಪಿ ಪಕ್ಷದಲ್ಲಿ ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಅಲ್ಲದೆ ಪಕ್ಷದ ಜವಬ್ದಾರಿಯನ್ನು ನಿಭಾಯಿಸುವಲ್ಲಿ ಯಶಸ್ವಿಯಾಗಿದ್ದರು.
ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಅವರು ನೇಮಕ ಮಾಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.