ಉಡುಪಿ: ಜಿಲ್ಲೆಯಲ್ಲಿ ಇಂದು ಕೂಡ ಯಾವುದೇ ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿಲ್ಲ. ಇದು ಜಿಲ್ಲೆಯ ಜನರಲ್ಲಿದ್ದ ಆತಂಕವನ್ನು ಸ್ವಲ್ಪ ಮಟ್ಟಿಗೆ ದೂರ ಮಾಡಿದೆ. ಜಿಲ್ಲೆಯಲ್ಲಿ ಇದುವರೆಗೆ 947 ಮಂದಿ ಸೋಂಕಿತರು ಪತ್ತೆಯಾಗಿದೆ. ಇಂದು 93 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಈವರೆಗೆ ಜಿಲ್ಲೆಯಲ್ಲಿ ಒಟ್ಟು 327 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇನ್ನು ಜಿಲ್ಲೆಯಲ್ಲಿ 619 ಸಕ್ರಿಯ ಪ್ರಕರಣಗಳಿವೆ. ಒಬ್ಬರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.