ಕಾರ್ಕಳ: ಭಾರತ ಸರ್ಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಉಡುಪಿ ಮತ್ತು ಯುವಕ ಮಂಡಲ ಸಾಣೂರು (ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಮತ್ತು ಜಿಲ್ಲಾ ಅತ್ಯುತ್ತಮ ಯುವ ಮಂಡಲ ಪ್ರಶಸ್ತಿ ವಿಜೇತ ಸಂಸ್ಥೆ) ಇದರ ವತಿಯಿಂದ ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ ಕೊರೊನಾ ಜಾಗೃತಿ ಗೋಡೆ ಬರಹ ಬರೆಯಲಾಯಿತು.
ಈ ಸಂದರ್ಭದಲ್ಲಿ ಮಂಡಲದ ಮಾಜಿ ಅಧ್ಯಕ್ಷರಾದ ಜಗದೀಶ್ ಕುಮಾರ್, ಅಧ್ಯಕ್ಷರಾದ ಪ್ರಸಾದ್ ಪೂಜಾರಿ, ಕಾರ್ಯದರ್ಶಿ ಮೋಹನ್ ಶೆಟ್ಟಿ, ಉಪಾಧ್ಯಕ್ಷ ಪ್ರಸಾದ್ ಶೆಟ್ಟಿ, ಸದಸ್ಯರುಗಳಾದ ಪ್ರಕಾಶ್ ರಾವ್, ಅನಿಲ್ ಕೋಟ್ಯಾನ್, ರೋಹಿತ್ ಹರಿಂದ್ರ ಶೆಟ್ಟಿ, ಅರ್ಜುನ್ ಶೆಟ್ಟಿ ಉಪಸ್ಥಿತರಿದ್ದರು.


















