ಉಡುಪಿ: ಪ್ರಾಥಮಿಕ ಸಂಪರ್ಕ ಹಾಗೂ ಟ್ರಾವೆಲ್ ಹಿಸ್ಟರಿಯ ಬಗ್ಗೆ ಜಿಲ್ಲಾಡಳಿತಕ್ಕೆ ತಪ್ಪು ಮಾಹಿತಿ ನೀಡಿದ ಇಬ್ಬರು ಕೊರೊನಾ ಸೋಂಕಿತರ ವಿರುದ್ಧ ಪ್ರಕರಣ ದಾಖಲಾಗಿದೆ.
ಜಿಲ್ಲೆಯ ಕೋವಿಡ್ 19 ಸೋಂಕಿತ ರೋಗಿಗಳಾದ 10186 ಮತ್ತು 10187 ತಮ್ಮ ಟ್ರಾವೆಲ್ ಹಿಸ್ಟರಿ ಮತ್ತು ಪ್ರಾಥಮಿಕ ಸಂಪರ್ಕದ ಬಗ್ಗೆ ಜಿಲ್ಲಾಡಳಿತಕ್ಕೆ ತಪ್ಪು ಮಾಹಿತಿ ನೀಡಿದ್ದರು. ಅವರು ತಪ್ಪು ಮಾಹಿತಿ ನೀಡಿದ್ದರಿಂದ ಸಂಪರ್ಕಿತರನ್ನು ಶೀಘ್ರವಾಗಿ ಪತ್ತೆಹಚ್ಚಲು ತೊಂದರೆ ಆಗಿದೆ. ಅಲ್ಲದೆ ಈ ರೀತಿ ಮಾಹಿತಿ ಮುಚ್ಚಿಡುವುದು ಅಪರಾಧವಾಗಿದ್ದು, ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ . ಕೋವಿಡ್ 19 ವಿರುದ್ಧದ ಹೋರಾಟದಲ್ಲಿ ಸಾರ್ವಜನಿಕರು ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕೆಂದು ಜಿಲ್ಲಾಡಳಿತ ವಿನಂತಿಸಿದೆ.