ಉಡುಪಿ: ಜಿಲ್ಲೆಯ ಬೈಂದೂರು ತಾಲ್ಲೂಕಿನ ಕೇಂದ್ರದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆಯ ಮೂಲಗಳಿಂದ ತಿಳಿದುಬಂದಿದೆ.
ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಮೂರು ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಜಿಲ್ಲೆಯಲ್ಲಿ ಮತ್ತಷ್ಟು ಆತಂಕ ಹೆಚ್ಚಿದೆ.
ತೀವ್ರ ಅಸ್ವಸ್ಥರಾದ ಹಿನ್ನೆಲೆಯಲ್ಲಿ ಈಕೆಯನ್ನು ಜೂ. 30ರಂದು ಕೊರೊನಾ ಪರೀಕ್ಷೆ ಒಳಪಡಿಸಲಾಗಿತ್ತು. ಮುಂಬೈನಿಂದ ಬಂದವರಿಂದ ಸೋಂಕು ತಗುಲಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಆದರೆ ಈವರೆಗೆ ಸೋಂಕು ಯಾವ ರೀತಿ ತಗುಲಿದೆ ಎನ್ನುವುದು ಖಚಿತಗೊಂಡಿಲ್ಲ.
ಈ ವಿದ್ಯಾರ್ಥಿನಿ ಈಗಾಗಲೇ ಮೂರು ಪರೀಕ್ಷೆ ಬರೆದಿದ್ದು, ನಿನ್ನೆ ರಾತ್ರಿ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಉಳಿದ ವಿಷಯಗಳನ್ನು ಮರು ಪರೀಕ್ಷೆಯಲ್ಲಿ ಬರೆಯಲು ಅವಕಾಶ ನೀಡಲಾಗುತ್ತದೆ ಎಂದು ಮೂಲಗಳಿಂದ ತಿಳಿದುಬಂದಿದೆ.