ಉಡುಪಿ ಜುಲೈ 1: 2020-21ನೇ ಸಾಲಿಗೆ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಉಡುಪಿ ಜಿಲ್ಲೆಗೆ, ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳಿಗೆ ಸಂಬಂಧಿಸಿದಂತೆ ಬೆಳೆ ಸಾಲ ಪಡೆದ ಹಾಗೂ ಬೆಳೆ ಸಾಲ ಹೊಂದಿಲ್ಲದ ರೈತರಿಗೆ ಐಚ್ಛಿಕ ವಿಮೆಯಲ್ಲಿ ಪಾಲ್ಗೊಳ್ಳಲು ಜುಲೈ 10 ರ ವರೆಗೆ ಅವಕಾಶವಿದ್ದು, ಹೆಚ್ಚು ರೈತರು ಇದರ ಪ್ರಯೋಜನ ಪಡೆಯಲು ತಿಳಿಸಲಾಗಿದೆ.
ಆಸಕ್ತ ರೈತರು ತಮ್ಮ ಸಮೀಪದ ಬ್ಯಾಂಕ್, ಸೊಸೈಟಿ, ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆಯು ರೈತ ಸಂಪರ್ಕ ಕೇಂದ್ರಗಳಿಗೆ, CSC digital Seva ಕೇಂದ್ರಗಳನ್ನು ಸಂಪರ್ಕಿಸುವAತೆ, ಉಡುಪಿ ತೋಟಗಾರಿಕಾ ಇಲಾಖೆಯ ಉಪ ನಿರ್ದೇಶಕರ ಪ್ರಕಟಣೆ ತಿಳಿಸಿದೆ.












