ಬೆಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ಜು.7ರಿಂದ 11ರವರೆಗೆ ಭಾರಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.
ಅರಬ್ಬಿ ಸಮುದ್ರದಿಂದ ರಾಜ್ಯದ ಕರಾವಳಿಯೆಡೆಗೆ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.
ಐದೂ ದಿನ ಯೆಲ್ಲೊ ಅಲರ್ಟ್’ ಘೋಷಿಸಲಾಗಿದ್ದು, ಮೀನುಗಾರರು ಕಡಲಿಗೆ ಇಳಿಯದಂತೆ ಇಲಾಖೆಯು ಎಚ್ಚರಿಕೆ ನೀಡಿದೆ.
ಜು.10ರಿಂದ ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದ್ದು, ಮುಂದಿನ 48 ಗಂಟೆಗಳವರೆಗೆ ಕೆಲವೆಡೆ ಸಾಧಾರಣ ಮಳೆಯಾಗುವುದು ಎಂದು ತಿಳಿಸಿದೆ.

















