ಉಡುಪಿ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಲಕ್ಷ್ಮೀನಗರದ ಶಾಲೆ ಹಿಂಬದಿಯಲ್ಲಿ ಕ್ಷುಲ್ಲಕ ಕಾರಣಕ್ಜೆ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಲಕ್ಷ್ಮೀನಗರದ ಯೋಗೀಶ್ ಕೊಲೆಯಾದ ಯುವಕ. ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ರೌಡಿ ಶೀಟರ್ ವಕ್ವಾಡಿ ಪ್ರವೀಣ್ ಹಾಗೂ ಗುರು ಭಟ್ ಕೊಲೆ ಪ್ರಕರಣದ ಆರೋಪಿಗಳಾಗಿದ್ದ ಸುಜೀತ್ ಪಿಂಟೋ ಸಹಚರರಿಂದ ಕೊಲೆ ನಡೆದಿದೆ ಎಂದು ತಿಳಿದುಬಂದಿದೆ.
ನಿನ್ನೆ ರಾತ್ರಿ ಯೋಗೀಶ್ ಹಾಗೂ ಆರೋಪಿಗಳ ನಡುವೆ ಗಲಾಟೆ ನಡೆದಿದೆ ಎನ್ನಲಾಗಿದ್ದು, ಈ ಗಲಾಟೆ ತಾರಕ್ಕೇರಿದ್ದು ಆರೋಪಿಗಳು ಯೋಗೀಶ್ ನನ್ನು ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.












