ಮಂಡ್ಯ: ಉದಯೋನ್ಮುಖ ನಟ ಸುಶೀಲ್ ಕುಮಾರ್ ಮಂಡ್ಯ ತಾಲ್ಲೂಕಿನ ಇಂಡುವಾಳು ಗ್ರಾಮದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಸುಶೀಲ್ ಕುಮಾರ್ ಅವರು ‘ಕಮರೊಟ್ಟು ಚೆಕ್ ಪೋಸ್ಟ್’, ‘ಸಲಗ’ ಚಿತ್ರಗಳು ಸೇರಿದಂತೆ ಹಲವು ಧಾರಾವಾಹಿಗಳಲ್ಲಿಯೂ ನಟಿಸಿದ್ದರು.
ಮಾಡೆಲಿಂಗ್ ಕ್ಷೇತ್ರದಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದ ಸುಶೀಲ್, ಮಂಡ್ಯದಲ್ಲಿ ಜಿಮ್ ತರಬೇತುದಾರ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಆದರೆ ಲಾಕ್ ಡೌನ್ ನಿಂದಾಗಿ ಕೆಲಸ ವಿಲ್ಲದೆ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಈ ಕಾರಣದಿಂದಲೇ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.