ಬೆಂಗಳೂರು: ಗೋಹತ್ಯೆ ನಿಷೇಧ ಕಾನೂನನ್ನು ಜಾರಿಗೊಳಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಪಶು ಸಂಗೋಪನಾ ಸಚಿವ ಪ್ರಭು ಚೌಹಾನ್ ತಿಳಿಸಿದ್ದಾರೆ.
ಗೋ ಸಂರಕ್ಷಣೆಗಾಗಿ ರಾಜ್ಯದಲ್ಲಿ ಗೋ ಹತ್ಯೆ ಮತ್ತು ರಕ್ಷಣಾ ಮಸೂದೆ 2012 ಜಾರಿಗೆ ತರುವುದು ಅನಿವಾರ್ಯವಾಗಿದೆ. ಈ ಕಾಯ್ದೆಯನ್ನು ಜಾರಿಗೊಳಿಸುವ ಮೂಲಕ ಗೋಮಾಂಸ ಮಾರಾಟ ಮತ್ತು ಸೇವನೆಯೊಂದಿಗೆ ಗೋಹತ್ಯೆಯನ್ನು ಸಂಪೂರ್ಣವಾಗಿ ನಿಷೇಧಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ ಎಂದು ಹೇಳಿದ್ದಾರೆ.
ಅನೇಕ ರಾಜ್ಯಗಳು ಗೋಹತ್ಯೆ ವಿರೋಧಿ ಮಸೂದೆಯನ್ನು ಅಂಗೀಕರಿಸಿದೆ. ನಾವು ಅದನ್ನು ಕರ್ನಾಟಕದಲ್ಲೂ ಜಾರಿಗೆ ತರಲು ತಯಾರಿ ನಡೆಸುತ್ತಿದ್ದೇವೆ ಎಂದು ಚೌಹಾನ್ ಹೇಳಿದ್ದಾರೆ.