ಜೈಪುರ: ರಾಜಸ್ಥಾನ ಕಾಂಗ್ರೆಸ್ ನಲ್ಲಿ ಬಿಕ್ಕಟ್ಟು ಉಂಟಾಗಿದ್ದು, ಕಾಂಗ್ರೆಸ್ನ ಇಬ್ಬರು ಪ್ರಮುಖ ನಾಯಕರ ನಡುವೆ ಭಿನ್ನಮತ ಸ್ಫೋಟಗೊಂಡಿದೆ.
ಮಧ್ಯಪ್ರದೇಶದಲ್ಲಿ ಭಿನ್ನಮತ ಉಂಟಾಗಿ ಸರಕಾರ ಪತನಗೊಂಡ ಅನಂತರ ಈಗ ರಾಜಸ್ಥಾನದಲ್ಲಿ ಭಿನ್ನಮತ ಭುಗಿಲೆದ್ದಿದೆ. ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹಾಗೂ ಸಚಿನ್ ಪೈಲಟ್ ನಡುವೆ ಎಲ್ಲವೂ ಸರಿಹೋಗದಿರುವುದು ಅಲ್ಲಿನ ಕೆಲವೊಂದು ಬೆಳವಣಿಗೆಗಳಿಂದ ತಿಳಿದುಬಂದಿದೆ. ಈ ಮಧ್ಯೆ ತನ್ನ 8 ಬೆಂಬಲಿತ ಶಾಸಕರೊಂದಿಗೆ ಪೈಲೆಟ್ ದೆಹಲಿಗೆ ತೆರಳಿದ್ದಾರೆ. ಹೈಕಮಾಂಡ್ ನಿರ್ಧಾರದ ಬಿಕ್ಕಟ್ಟಿನ ಬಗ್ಗೆ ತಿಳಿಸಲಾಗುವುದು ಎಂದಿದ್ದಾರೆ.
ಅಲ್ಲದೇ ಪ್ರಭಾವಿ ನಾಯಕರಾಗಿರುವ ಸಚಿನ್ ಪೈಲೆಟ್ ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಸೇರುತ್ತಾರೆಂಬ ಮಾತುಗಳು ಬಲವಾಗಿ ಕೇಳಿಬರುತ್ತಿದೆ.
ರಾಜಕೀಯ ಬೆಳವಣಿಗೆ ಕುರಿತು ಮುಖ್ಯಮಂತ್ರಿ ಗೆಹ್ಲೋಟ್ ಮಾತನಾಡಿದ್ದು, ಬಿಜೆಪಿ ಕಾಂಗ್ರೆಸ್ ಶಾಸಕರಿಗೆ ಹಣದ ಆಮಿಷವೊಡ್ಡಿ ಸರಕಾರ ಉರುಳಿಸಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.