ಉಡುಪಿ: ಕೊರೊನಾ ಸೋಂಕಿಗೆ ಮರವಂತೆಯ 58 ವರ್ಷದ ವ್ಯಕ್ತಿ ಸಾವು

ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದಂತೆ ಕೊರೊನಾದಿಂದ ಮರಣ ಹೊಂದುತ್ತಿರುವವರ ಸಂಖ್ಯೆಯೂ ನಿಧನವಾಗಿ ಏರಿಕೆ ಆಗಲು ಆರಂಭಿಸಿದೆ.
ಕುಂದಾಪುರದಲ್ಲಿ ನಿನ್ನೆ ರಾತ್ರಿ ಮರವಂತೆಯ 58 ವರ್ಷದ ವ್ಯಕ್ತಿಯೊಬ್ಬರು ಕೊರೊನಾದಿಂದ ಮೃತಪಟ್ಟ ಬಗ್ಗೆ ವರದಿಯಾಗಿದೆ. ಇವರು ತೀವ್ರತರದ ಅಸ್ತಮಾ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಇವರನ್ನು ಕೊರೊನಾ ಪರೀಕ್ಷೆ ಒಳಪಡಿಸಿದಾಗ ಕೊರೊನಾ ಪಾಸಿಟಿವ್ ದೃಢಪಟ್ಟಿತ್ತು. ಆದರೆ ಇವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ವ್ಯಕ್ತಿಯೊಬ್ಬರಲ್ಲೂ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಅವರು ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಸಾವನ್ನಾಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಉಡುಪಿಯ ಡಾ. ಟಿಎಂಎ ಪೈ ಕೋವಿಡ್ ಆಸ್ಪತ್ರೆಯಲ್ಲಿ ಕುಕ್ಕೆಹಳ್ಳಿಯ 49 ವರ್ಷದ ವ್ಯಕ್ತಿಯೊಬ್ಬರು ಕೊರೊನಾ ಮೃತಪಟ್ಟಿದ್ದರು. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.