ಕಕ್ಯಪದವು: ಕ್ರೀಡಾ ಹಾಗೂ ಸಾಂಸ್ಕೃತಿಕವಾಗಿ ಸಾಧನೆಗೈದು ಮುಂಚೂಣಿಯಾಗಿ ಗುರುತಿಸಿಕೊಂಡಿರುವ ಎಲ್.ಸಿ.ಆರ್. ಇಂಡಿಯನ್ ಪದವಿ ಪೂರ್ವ ಕಾಲೇಜು ಈ ಬಾರಿ ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿಯೂ ಉತ್ತಮ ಸಾಧನೆ ತೋರಿದ್ದು, ಪರೀಕ್ಷೆಗೆ ಹಾಜರಾದ 43 ವಿದ್ಯಾರ್ಥಿಗಳಲ್ಲಿ 39 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ. 91.00 ಫಲಿತಾಂಶ ದಾಖಲಿಸಿದೆ. 2 ವಿದ್ಯಾರ್ಥಿಗಳು ವಿಶಿಷ್ಟ ಶೇಣಿಯಲ್ಲಿ, 27 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಗೊಂಡು, ಅನುಕ್ರಮವಾಗಿ ಶಹಿನಾಜ್ (535), ಧನುಷ್(513), ಹೇಮರಾಜ್ (505) ಪ್ರಥಮ, ದ್ವಿತೀಯಾ, ತೃತೀಯಾ ಸ್ಥಾನವನ್ನು ಪಡೆದಿರುತ್ತಾರೆ ಎಂದು ಕಾಲೇಜಿನ ಪ್ರಕಟನೆ ತಿಳಿಸಿದೆ.