ಕರಾವಳಿ ಜಿಲ್ಲೆಗಳಲ್ಲಿ ಜು.20 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ

ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ಜು. 19, 20 ರಂದು ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ 5 ದಿನಗಳವರೆಗೆ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇರುವುದರಿಂದ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮೀನುಗಾರರು ಸಮುದ್ರ ಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದೆ.